ಕುಮಟಾ : ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಂಯೋಜನೆಯಲ್ಲಿ 03/04/2021 ರ ಶನಿವಾರದಂದು ಮಧ್ಯಾಹ್ನ 02:30 ರಿಂದ 04:30 ರ ವರೆಗೆ ಇವೆಂಟ್ ಮ್ಯಾನೇಜ್ಮೆಂಟ್ ಕುರಿತಾದ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸರಸ್ವತಿ ಮಾಳಪ್ಪ ಕಾಮತ್ ಕೃಷಿ ಮತ್ತು ವೃತ್ತಿಪರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ನಡೆಯುವ ಈ ಕಾರ್ಯಾಗಾರದಲ್ಲಿ ಶಿಕ್ಷಕ ಹಾಗೂ ಸಾಹಿತಿ ಹಾಗೂ ಇವೆಂಟ್ ಮ್ಯಾನೇಜ್ಮೆಂಟ್ ತರಬೇತುದಾರ ಶ್ರೀಧರ ಶೇಟ್ ಶಿರಾಲಿ ಕಾರ್ಯಕ್ರಮ ಸಂಯೋಜನೆ ಹಾಗೂ ಅವುಗಳ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅಂಶಗಳ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ.
ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ಈ ಯುಗದಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಒಂದು ಉದ್ಯಮವಾಗಿ ಬೆಳೆಯುತ್ತಿದ್ದು ಆ ಬಗ್ಗೆ ಯುವಕರಿಗೆ ಹಾಗೂ ಆಸಕ್ತರಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂಬುದನ್ನು ಮನಗಂಡ ಸಂಸ್ಥೆ ಈ ಕಾರ್ಯಾಗಾರದ ಮೂಲಕ ಹೊಸ ಪ್ರಯೋಗಕ್ಕೆ ಮುನ್ನುಡಿ ಬರೆಯಲಿದೆ.
ಈ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಯಾವುದೇ ರೀತಿಯ ಶುಲ್ಕ ಇಲ್ಲವಾಗಿದ್ದು (ನಿಶುಲ್ಕ), ಹೊಸ ಉದ್ಯೋಗ/ ವೃತ್ತಿ ಯ ಅನ್ವೇಷಣೆಯಲ್ಲಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಅವಕಾಶವನ್ನು ಹೆಚ್ಚಿನವರು ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.
ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಸಂಸ್ಥೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾವಣೆಗಾಗಿ 9449294401, 8970612257, 9482212898 ಗೆ ಸಂಪರ್ಕಿಸಲು ತಿಳಿಸಿದೆ.