ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 66 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,250 ಕ್ಕೆ ಏರಿಕೆ ಕಂಡಿದೆ.

ಕಾರವಾರ ೩೬, ಅಂಕೋಲಾ‌ ೫ , ಕುಮಟಾ ೩, ಹೊನ್ನಾವರ ೨, ಭಟ್ಕಳ ೨, ಶಿರಸಿ ೦, ಸಿದ್ದಾಪುರ ೨, ಯಲ್ಲಾಪುರ ೩, ಮುಂಡಗೋಡ ೨, ಹಳಿಯಾಳ ೧೧ ಜನರಲ್ಲಿ ಕೊರೋನಾ ಕಾಣಿಸಿಕೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕು ವ್ಯಾಪಕವಾಗಿದ್ದು ,ಈ ಹಿಂದೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ವರದಿ ಬೆನ್ನಲ್ಲೇ ಜಿಲ್ಲೆಯ “ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜು” ವಿದ್ಯಾರ್ಥಿಗಳಿಗೂ ಕರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಕಾರವಾರ ಮೆಡಿಕಲ್ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸುಮಾರು 450 ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

RELATED ARTICLES  ಕುಮಟಾದಲ್ಲಿ ಸಿಡಿಲುಬಡಿದು ಯುವತಿ ಬಲಿ

ಪರೀಕ್ಷೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಅಂತಿಮ ಎಂಬಿಬಿಎಸ್‍ನ ಸುಮಾರು 150 ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ಮುಂದುವರೆದಿದೆ. ಕಾಲೇಜಿನ ಮೂವರು ವಿದ್ಯಾರ್ಥಿನಿಯರಿಗೆ ಎರಡು ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಯಿತು. ಪ್ರಥಮ ಮತ್ತು ದ್ವಿತೀಯ ವರ್ಷದ 24 ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನು ಕಾಲೇಜಿನ ಉಳಿದ ಬಹುತೇಕ ವಿದ್ಯಾರ್ಥಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಲಸಿಕೆ ಪಡೆದಿರಲಿಲ್ಲ, ಅಲ್ಲದೇ ಬಿಡುವಿನ ಸಮಯದಲ್ಲಿ ಮೋಜು ಮಸ್ತಿ ಎಂದು ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಹಾಗೂ ಇತರ ಪ್ರದೇಶಗಳಿಗೆ ಈ ವಿದ್ಯಾರ್ಥಿನಿಯರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸೋಂಕು ತಗುಲಿದ್ದು ,ಇವರ ಸಂಪರ್ಕ ಮಾಡಿದ ವಿದ್ಯಾರ್ಥಿಗಳಿಗೆ ಸೊಂಕು ತಗುಲಿದೆ.

RELATED ARTICLES  ಫೆಬ್ರವರಿ 25 ಮತ್ತು 26 ರಂದು ಚಂದಾವರ ಶ್ರೀ ಹನುಮಂತ ದೇವರ ಕಲಾವೃದ್ಧಿ ಮತ್ತು ಗೋಪುರದ ಕಲಶಾರೋಹಣ

ಇನ್ನು ಇವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದನಂತರ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಲಸಿಕೆಯ ಮೊದಲ ಡೋಸ್ ಪಡೆದಿರುವ 24 ವಿದ್ಯಾರ್ಥಿಗಳಲ್ಲೂ ಸೋಂಕು ಪತ್ತೆಯಾಗಿದೆ.

ಆದರೆ ಈ ಲಸಿಕೆ ಪಡೆದ ವಿದ್ಯಾರ್ಥಿಗಳಲ್ಲಿ ಯಾವುದೇ ತರಹದ ರೋಗ ಲಕ್ಷಣವೂ ಇರಲಿಲ್ಲ. ಆರೋಗ್ಯ ಸ್ಥಿತಿ ತೀರಾ ಸಹಜವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿರುವುದು ಕಂಡುಬಂದಿದೆ ಎಂದು ಕಾಲೇಜಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.