ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಸಮೀಪ ಕಾರ್ ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಬಾಲಕನಿಗೆ ಗಂಭೀರವಾಗಿ ಗಾಯಗಳಾದ ಘಟನೆ ವರದಿಯಾಗಿದೆ.
ಕಾರೊಂದು ಅತಿವೇಗವಾಗಿ ಬಂದು ರಿಕ್ಷಾಗೆ ಗುದ್ದಿದ ಪರಿಣಾಮ, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಗಾಯಗೊಂಡ ರಿಕ್ಷಾಚಾಲಕನನ್ನು ದುರ್ಗಾಕೇರಿಯ ಗುರುರಾಜ ಕಾಮತ್ ಎಂದು ಗುರುತಿಸಲಾಗಿದೆ. ಇವರ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಈ ವೇಳೆ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆಂದು ಸ್ಥಳೀಯ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಗೇರುಸೊಪ್ಪಾ ಸಮೀಪ ಅತಿವೇಗ ಹಾಗು ನಿರ್ಲಕ್ಷ್ಯ ತನದಿಂದ ಕಾರು ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಚಾಲಕ ಗುದ್ದಿದ್ದಾನೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.