ಕಾರವಾರ: ತಾಲೂಕಿನ ಕದ್ರಾ ಸಮೀಪದ ಬೈರೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.ಪಲ್ಟಿಯಾದ ರಭಸಕ್ಕೆ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆಸ್ಪತ್ರೆಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಹಳಗಾ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ದು, ಚಿಕಿತ್ಸೆಯ ಬಳಿಕ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರನ್ನು ಚಾಲಕ ಸೈಯದ್ ಹಾಗೂ ತಾಯವ್ವ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.