ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಅವರು ಇಂದು ಬೆಳಗ್ಗೆ ನಿಧನರಾದರು.
ಮುಂಜಾನೆ ಎಂ.ಎ.ಹೆಗಡೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದರು. ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು ಆನಂತರ ಸಂಸ್ಕೃತ ಉಪನ್ಯಾಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದ ಹೆಗಡೆ ಅವರು ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದರು.
ಸ್ವತಃ ಪಾತ್ರಧಾರಿಯು ಆಗಿದ್ದ ಎಂ.ಎ. ಹೆಗಡೆಯವರು 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಸೀತ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಮುಂತಾದ ಜನಪ್ರಿಯ ಪ್ರಸಂಗಗಳನ್ನು ರಚಿಸಿದ್ದಾರೆ. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ಅವರು ರಚಿಸಿದ್ದಾರೆ.
ಇವರ ಸಾವಿಗೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ದುಃಖವನ್ನು ಬರಿಸಯವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.