ಕಾರವಾರ: ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದೆ. ಜೊತೆಗೆ ನಿಯಮಗಳೂ ಕಠಿಣವಾಗುತ್ತಿದೆ. ಸರಕಾರ ಅನೇಕ ಮಾರ್ಗಸೂಚಿ ಹೊರಡಿಸಿದ್ದು ಸಮಾರಂಭದ ಬಗ್ಗೆಯೂ ಗೈಡ್ ಲೈನ್ ನೀಡಿದೆ.

ಇಂದು ಕಾರವಾರ ತಾಲೂಕಿನ ಸದಾನಂದ ಪ್ಯಾಲೇಸ್ ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ 50ಕ್ಕೂ ಹೆಚ್ಚು ಜನರು ಸೇರಿದ್ದ ಮದುವೆ ಸಮಾರಂಭವೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಹಾಗೂ ಪೊಲೀಸರು ಮದುವೆಗೆ ಬಂದವರನ್ನು ಸಭಾಂಗಣದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ.

ಕೋವಿಡ್ ಮಾರ್ಗಸೂಚಿ ಪ್ರಕಟಗೊಳ್ಳುವುದಕ್ಕಿಂತಲೂ ಮೊದಲೇ ಈ ಮದುವೆ ನಿಗದಿಯಾಗಿತ್ತು. ಜೊತೆಗೆ ಮದುವೆಯನ್ನು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಲಾಗುತ್ತಿತ್ತು. ಈ ವೇಳೆ ದಿಢೀರ್ ಆಗಿ ಮಾಂಗಲ್ಯ ಧಾರಣೆಯೂ ನಡೆದು, ಆರತಕ್ಷತೆ ನಡೆಯುತ್ತಿದ್ದ ವೇಳೆ ಸಭಾಂಗಣಕ್ಕೆ ಪೊಲೀಸರೊಂದಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

RELATED ARTICLES  ಸೈಕಲ್ ಕಳ್ಳತನ ಮಾಡಿದ್ದ ಆರೋಪಿ ಅಂದರ್:ಚಾಣಾಕ್ಷತನದಿಂತ ಪ್ರಕರಣ ಬೇದಿಸಿದ ಕುಮಟಾ ಪೋಲೀಸರು..!!

ಸಭಾಂಗಣದಲ್ಲಿ 50ಕ್ಕಿಂತ ಹೆಚ್ಚು ಜನರು ಸೇರಿದ್ದ ಕಾರಣ, ನಿಗದಿತ ಜನರನ್ನು ಹೊರತುಪಡಿಸಿ ಉಳಿದವರೆಲ್ಲ ಹೊರ ಹೋಗುವಂತೆ ಮೈಕ್ ನಲ್ಲಿ ಪೊಲೀಸರು ಸೂಚಿಸಿದ್ದಾರೆ. ಇದರಿಂದಾಗಿ ಕಕ್ಕಾಬಿಕ್ಕಿಯಾದ ಮದುವೆಗೆ ಆಗಮಿಸಿದ್ದವರಲ್ಲಿ ಕೆಲವರು ಉಡುಗೊರೆಯೂ ನೀಡದೇ, ಊಟವನ್ನೂ ಮಾಡದೆ ಭಯದಲ್ಲಿ ಸಭಾಂಗಣದಿ0ದ ತರಾತುರಿಯಲ್ಲಿ ಹೊರ ಹೋಗಿದ್ದಾರೆ.

ಪೊಲೀಸರ ಈ ಕ್ರಮಕ್ಕೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮ ಇದಾಗಿದ್ದು, ಮಾರ್ಗಸೂಚಿ ಪ್ರಕಟವಾಗುವ ಮುನ್ನವೇ ಆಮಂತ್ರಣ ಪತ್ರಿಕೆಯೆಲ್ಲ ಹಂಚಿಯಾಗಿತ್ತು. ಮದುವೆಗೆ ಬಂದವರಿಗೂ ಹೊರ ಹೋಗುವಂತೆ ಹೇಳಲು ಆಗದ ಕಾರಣ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸುವಿಕೆ ಹಾಗೂ ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ದಿಢೀರ್ ಎಂದು ಅಧಿಕಾರಿಗಳು ದಾಳಿ ನಡೆಸಿದ್ದು ಬೇಸರವೆನಿಸಿತು ಎಂದು ಕುಟುಂಬಸ್ಥರು ಅಳಲು ತೋಡಿಕೊಂಡರು.

RELATED ARTICLES  ನಿತ್ರಾಣಗೊಂಡಿದ್ದ ಕಾಡು ಕೋಣಕ್ಕೆ ಆರೈಕೆ.

ಕೆಲ ಸಮಯದ ಬಳಿಕ ಸಾಮಾಜಿಕ ಅಂತರ ಕಾಯ್ದುಕೊಂಡು ಉಡುಗೊರೆ ನೀಡಲು ಹಾಗೂ ಊಟಕ್ಕೆ ಅವಕಾಶ ನೀಡಲಾಯಿತು. ಬಳಿಕ ಸರದಿ ಸಾಲಿನಲ್ಲಿ ಉಡುಗೊರೆ ನೀಡಿ, ಕೆಲವರು ಊಟ ಮಾಡಿ ತೆರಳಿದರು. ಮದುವೆ ಜೀವನದಲ್ಲಿ ಒಮ್ಮೆ ನಡೆಯುವುದು. ತಂದೆ- ತಾಯಿಗೆ ಒಬ್ಬರೇ ಮಕ್ಕಳಿದ್ದರಂತೂ ಮದುವೆಗೆ ನೂರಾರು ಕನಸಿಟ್ಟುಕೊಂಡಿರುತ್ತಾರೆ.

ಆದರೆ ಈ ರೀತಿ ಕೋವಿಡ್ ಹೆಸರಲ್ಲಿ ಸಂಭ್ರಮದ ಕಾರ್ಯಕ್ರಮದಲ್ಲಿ ಆತಂಕ ಉಂಟು ಮಾಡುವ ಕಾರ್ಯವಾಗಬಾರದು. ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚಿಸಿ ಇಂಥ ಕಾರ್ಯಕ್ರಮಗಳ ಆಚರಣೆಗೆ ಅವಕಾಶ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.