ಕಾರವಾರ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ.5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ.5 ರಿಂದ 7 ರವರೆಗೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮೇ 6, 7 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES  ಜಿ ಎಸ್ ಟಿ ದರ ಇಳಿಕೆಯಿಂದ ದೀಪಾವಳಿ ಸಂತಸ ಹೆಚ್ಚಿದೆ: ಮೋದಿ

ಮುಂದಿನ 72 ಗಂಟೆಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.