ಬೆಂಗಳೂರು : ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಘೋಷಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಅವರು ಮಾದ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು

RELATED ARTICLES  ಮತ್ತೆ ಮಳೆಯ ಅಲರ್ಟ್..!

ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು. ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

RELATED ARTICLES  ಕ್ಯಾಂಪಸ್ ಸಂದರ್ಶನ ನಾಳೆ.

ಈ ಸಾಲಿನ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ತಿಳಿಸಿದ ಶಿಕ್ಷಣ ಸಚಿವರು ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಕೂಡ ಪ್ರಕಟಿಸಿದರು

Source : Nikhara News