ಯಲ್ಲಾಪುರ : ಪಟ್ಟಣದ ಗಣಪತಿ ಗಲ್ಲಿಯಲ್ಲಿ ಮಗುವೊಂದರ ಗಂಟಲಲ್ಲಿ ಶೇಂಗಾ ಬೀಜ ಸಿಲುಕಿ ಉಸಿರುಗಟ್ಟಿ ಮೃತಪಟ್ಟ ಘಟನೆ ನಡೆದಿದೆ. ಯಲ್ಲಾಪುರದ ರಾಮನಾಥ ಆಚಾರಿ ಅವರ ಎರಡೂವರೆ ವರ್ಷದ ಸಾತ್ವಿಕ್ ಮೃತ ಮಗುವಾಗಿದ್ದು, ಬಾಲಕ ಮನೆಯಲ್ಲಿ ಸಂಜೆ ಶೇಂಗಾ ಬೀಜಗಳನ್ನು ತಿನ್ನುತ್ತಿದ್ದಾಗ ಅಚಾನಕ್ ಆಗಿ ಶೇಂಗಾ ಬೀಜ ಗಂಟಲಲ್ಲಿ ಸಿಲುಕಿಕೊಂಡಿವೆ.

RELATED ARTICLES  ಹಿಜಾಬ್ ಕೇಸರಿ ಶಾಲು ವಿವಾದ - ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ

ಮೂರು ಶೆಂಗಾ ಬೀಜಗಳು ಗಂಟಲಿನಲ್ಲಿ‌ಸಿಲುಕಿದ್ದ ಕಾರಣ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಮನೆಯವರು ಎರಡು ಶೇಂಗಾ ಬೀಜ ಹೊರತೆಗೆದರೂ ಮಗು ಉಸಿರು ಚೆಲ್ಲಿದ್ದಾನೆ.
ವೈದ್ಯರು ಗಂಟಲಲ್ಲಿದ್ದ ಮತ್ತೊಂದು ಶೇಂಗಾ ಬೀಜವನ್ನು ಹೊರತೆಗೆದರು. ಆದರೆ ಅಷ್ಟರಲ್ಲಿ ಮಗುವಿನ ಉಸಿರು ನಿಂತಿತ್ತು.

ಮಗು ಸಾವನ್ನಪ್ಪಿದ ತಕ್ಷಣ ದಿಕ್ಕೇ ತೋಚದ ಮಗುವಿನ ಅಜ್ಜಿ, ಸಮೀಪದ ದೇವಸ್ಥಾನಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಿ ಬದುಕಿಸಿಕೊಡುವಂತೆ ಅಂಗಲಾಚಿದ ಮನ ಕಲುಕುವ ಘಟನೆ ನಡೆದಿದೆ.

RELATED ARTICLES  ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದೆ ಭಾರತೀಯ ಸೇನಾಪಡೆ!

ಅಜ್ಜಿ ಮೊಮ್ಮಗನ ಮೃತದೇಹವನ್ನು ಸಮೀಪದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯ ಆವರಣದಲ್ಲಿರುವ ಗಣಪತಿ ಮಂದಿರಕ್ಕೆ ತೆಗೆದುಕೊಂಡು ಹೋದರು. ಗರ್ಭಗುಡಿಯೆದುರು ಮಲಗಿಸಿದ ಅಜ್ಜಿ, ದೇವಸ್ಥಾನದ ಘಂಟೆಯನ್ನು ಬಾರಿಸುತ್ತಾ, ಮಗುವನ್ನು ಬದುಕಿಸು ಎಂದು ಮೊರೆ ಹೋದರು.