ಕಾರವಾರ : ಕರೋನಾ ಪ್ರಕರಣಗಳು ನಿಯಂತ್ರಣ ತಪ್ಪಿ ಆಗಿರುವ ಕಾರಣದಿಂದ ಉತ್ತರಕನ್ನಡದಲ್ಲಿ ಜಿಲ್ಲಾಡಳಿತದ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ವಾರಾಂತ್ಯ ಅಂದರೆ ಮೇ 22 ರ ಬೆಳಿಗ್ಗೆ 6.೦೦ ಗಂಟೆಯಿಂದ ಮೇ 24 ರ ಬೆಳಿಗ್ಗೆ 6 ೦೦ ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಕಠಿಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ.

ಇದಿಷ್ಟೇ ಅಲ್ಲದೇ ವ್ಯಾಪಕವಾಗಿ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ನಾಲ್ಕು ತಾಲೂಕುಗಳು ಲಾಕ್ ಡೌನ್ ಮಾಡಲು ಸೂಚನೆ ನೀಡಲಾಗಿದೆ. ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳಲ್ಲಿ ಅತೀ ಹೆಚ್ವು ಸೋಂಕು ಪತ್ತೆಯಾಗುತಿದ್ದು ಈ ತಾಲೂಕುಗಳನ್ನು ಕಂಟೈಮ್ಮೆಂಟ್ ವಲಯವಾಗಿ ಘೋಷಣೆ ಮಾಡಲಾಗಿದ್ದು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ.

RELATED ARTICLES  ಕನ್ನಡದ ಹೆಸರಾಂತ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ.

ಈ ತಾಲೂಕುಗಳನ್ನು ಹೊರತುಪಡಿಸಿದರೆ ಉಳಿದ ತಾಲೂಕುಗಳಲ್ಲಿ ಮೇ 22ರ ಬೆಳಿಗ್ಗೆ ಆರು ಗಂಟೆಯಿಂದ ಲಾಕ್ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

RELATED ARTICLES  ಆರೋಗ್ಯವಿದ್ದರೆ ಜೀವನ, ಜೀವನವಿದ್ದರೆ ಸಾಧನೆ : ಬನ್ನೇರುಘಟ್ಟ ಬೇಸ್ ಕಾಲೇಜಿನ 'ಆರಂಭ-24' ಸಮಾರಂಭದಲ್ಲಿ ಡಾ.ಶಶಿಧರ ಬುಗ್ಗಿ

ಇದಲ್ಲದೇ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ಲಾಕ್ ಡೌನ್ ಮುಂದುವರೆಸುವ ಕುರಿತು ನಿರ್ಣಯ ತೆಗೆದುಕೊಳ್ಳಲಾಗುತ್ತದೆ. ಸಾರ್ವಜನಿಕರು ಕರೋನಾ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಕರೋನಾ ಎಗ್ಗಿಲ್ಲದೆ ಹರಡುತ್ತಿದ್ದು ಅವುಗಳನ್ನು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಸರ್ಕಾರ ಕ್ರಮ ಜಾರಿಗೊಳಿಸುತ್ತಿದೆ. ಜನತೆ ಅದಕ್ಕೆ ಸ್ಪಂದಿಸುವ ಮೂಲಕ ನಿಯಂತ್ರಣಕ್ಕೆ ಸಹಕರಿಸಬೇಕಿದೆ.