ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ(103) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇತ್ತೀಚಿಗಷ್ಟೇ ಕೋವಿಡ್ ನಿಂದ ಗುಣಮುಖರಾಗಿದ್ದ ದೊರೆಸ್ವಾಮಿ, ಉಸಿರಾಟದ ಸಮಸ್ಯೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1918 ಏಪ್ರಿಲ್ 10ರಂದು ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ ದೊರೆಸ್ವಾಮಿ ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಿದ್ದರು. ಭೂಕಬಳಿಕೆ ಹೋರಾಟದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಮಾತ್ರವಲ್ಲದೆ ಪುಸ್ತಕ ಪ್ರಕಾಶನ ಮತ್ತು ಪತ್ರಿಕೋದ್ಯಮದಲ್ಲೂ ಛಾಪು ಮೂಡಿಸಿದ್ದರು.

RELATED ARTICLES  ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ : ಪೊಲೀಸರಿಂದ ಬಿಗಿ ಬಂದೋಬಸ್ತ್.

1942 ರ ಹೊತ್ತಿಗೆ ತಮ್ಮ ಬಿ.ಎಸ್.ಸಿ ಯನ್ನು ಪೂರ್ಣಗೊಳಿಸಿದ ದೊರೆಸ್ವಾಮಿ, ಉಪನ್ಯಾಸಕರಾಗಿ ಕಾಲೇಜಿನಲ್ಲಿ ಸೇರಿಕೊಂಡರು. ಕ್ವಿಟ್ ಇಂಡಿಯಾ ಸ್ವಾತಂತ್ರ್ಯ ಚಳುವಳಿಯು ಆರಂಭವಾಗಿ, 14 ತಿಂಗಳ ಕಾಲ ಮೊದಲ ಬಾರಿಗೆ ಜೈಲಿನಲ್ಲಿದ್ದಾಗ ಅವರು ಅಹಿಂಸೆ ಮತ್ತು ಸತ್ಯಾಗ್ರಹದ ಗಾಂಧಿಯವರ ಆದರ್ಶಗಳನ್ನು ಅನುಸರಿಸಲು ನಿರ್ಧರಿಸಿದರು. ನಂತರ ಅವರು ಪುಸ್ತಕ ಮಳಿಗೆ ಮತ್ತು ಪ್ರಕಾಶನ ಡಿಪೋವನ್ನು ಸ್ಥಾಪಿಸಿದರು.

RELATED ARTICLES  ಸಾಮಾಜಿಕ ನ್ಯಾಯದ ಹರಿಕಾರ ಅಂಬೇಡ್ಕರ್ ಅವರ ಜಯಂತಿ ಆಚರಣೆ.

source: Online News