ಯಲ್ಲಾಪುರ: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕಾರ್ಮಿಕ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಹಾಗೂ ಆಕ್ಸಿಜನ್ ಉತ್ಪಾದನಾ ಘಟಕದ ಪರಿಶೀಲನೆ ನಡೆಸಿದರು.

RELATED ARTICLES  ಕಲಿಕೆ ಜ್ಞಾನಮಯ, ಆನಂದಮಯವಾದರೆ ವಿದ್ಯೆ ಸಾರ್ಥಕ: ರಾಘವೇಶ್ವರ ಶ್ರೀ

ನಂತರ ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಯ ಸದ್ಯದ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕೋರೊನಾ ತೀವ್ರತೆ ಬಗ್ಗೆ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿ, ತಜ್ಞ ಮಕ್ಕಳ ವೈದ್ಯರ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

RELATED ARTICLES  ರಸ್ತೆ–ಸೇತುವೆ ಕಾಮಗಾರಿಗೆ ₹ 39 ಕೋಟಿ ಮಂಜೂರು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಪಿ. ಮುಲೈ ಮುಹಿಲನ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.