ಕಾರವಾರ: ನಗರದ ಎಂ.ಜಿ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯ್ತಿ ಅಭಿಲೇಖಾಲಯದಲ್ಲಿ ಇಂದು ಬೆಳಗ್ಗೆ ವಿದ್ಯುತ್ ಷಾರ್ಟ ಸೆರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವುದು ವರದಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿ ಮೂರು ಅಂತಸ್ತಿನ ಕಟ್ಟಡಕ್ಕೆ ವ್ಯಾಪಸಿದೆ.ಈ ಘಟನೆಯಿಂದಾಗಿ ಕಟ್ಟಡದ ಕೆಳಭಾಗದಲ್ಲಿ ಇದ್ದ ಪೀಠೋಪಕರಣಗಳು, ಕಚೇರಿಯ ದಾಖಲೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ.

RELATED ARTICLES  ಕೊಂಕಣದ ಅಂಗಳದಲ್ಲಿ ಸಾಫ್ಟ್ ಲ್ಯಾಂಡ್ ಮಾಡಿದ ಇಸ್ರೋ : ಕಾರ್ಯಾಗಾರದಲ್ಲಿ ಪಾಲ್ಗೊಂಡು ಪುಳಕಿತರಾದ ಪ್ರೌಢಶಾಲಾ ವಿದ್ಯಾರ್ಥಿಗಳು

ಮೇಲ್ಬಾಗದ ಕಟ್ಟಡಕ್ಕೂ ಬೆಂಕಿ ಆವರಿಸಿದ್ದು ಅಲ್ಪ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯ್ತಿ ಸಿ.ಇ.ಓ ಪ್ರಿಯಾಂಗ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು ಹಾಗೂ ಅಲ್ಲಿ ನಡೆದಿರುವ ಘಟನಾವಳಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.

RELATED ARTICLES  ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಆನಂದ್ ಆಸ್ನೋಟಿಕರ್ ಪರ ಪ್ರಚಾರ ಸಭೆ : ಕುಮಟಾದಲ್ಲಿ ಮುಖ್ಯಮಂತ್ರಿಯಿಂದ ಮತ ಬೇಟೆ.

ವಿದ್ಯುತ್ ಶಾರ್ಟ್ ಸಾವಿರದಿಂದ ನಡೆದ ಅವಘಡದಿಂದಾಗಿ ಅಂದಾಜು 2 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಿದೆ.