ಕುಮಟಾ : ತಾಲೂಕಿನ ವಾಲಗಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಕುಮಟಾ-ಹೊನ್ನಾವರ ಹಾಲಕ್ಕಿ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜದ ಮುಖಂಡರು ಆದ ಶ್ರೀ ಮಂಜುನಾಥ ಗೌಡ ಅವರು ಇಂದು ಇಹಲೋಕ ತ್ಯಜಿಸಿರುವ ಬಗ್ಗೆ ವರದಿಯಾಗಿದೆ.
ಕೋವಿಡ್ ಸೋಂಕು ತಗುಲಿದ್ದ ಇವರು ಅನಾರೋಗ್ಯದಿಂದ ಸುಧಾರಿಸಿಕೊಳ್ಳುತ್ತಿದ್ದರು ಎನ್ನಲಾಗಿತ್ತು, ಅವರಿಗೆ ಕೋವಿಡ್ ಸೋಂಕು ತಗುಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ ಎಂದು ಅವರ ಆಪ್ತ ವಲಯದವರು ಸತ್ವಾಧಾರ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಇವರಿಗೆ 43 ವರ್ಷ ವಯಸ್ಸಾಗಿತ್ತು.
ಸಮಾಜದ ಸಂಘಟನೆಯ ಚಟುವಟಿಕೆಯಲ್ಲಿ ಸದಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಮಂಜುನಾಥ ಗೌಡ ಅವರ ಆತ್ಮಕ್ಕೆ ಶ್ರೀ ಕಾಲಭೈರವ ಸದ್ಗತಿಯನ್ನು ಕರುಣಿಸಲಿ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಕೊಳ್ಳುತ್ತದೆ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು
ಹಾಲಕ್ಕಿ ಒಕ್ಕಲಿಗರ ಸಂಘ ಕುಮಟಾ-ಹೊನ್ನಾವರ ಇವರು ಸಂತಾಪ ಸೂಚಿಸಿದ್ದಾರೆ.
ಕುಮಟಾ ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಇವರು, ಜನರ ಜೊತೆಗೆ ಉತ್ತಮ ಬಾಂದವ್ಯ ಹೊಂದಿದ್ದು ಜನ ಹಿತಕ್ಕಾಗಿ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡವರಾಗಿದ್ದರು.