ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು ಕೇವಲ 366 ಜನರಲ್ಲಿ ಪಾಸಿಟಿವ್ ವರದಿಯಾಗಿದೆ. ಆರು ಜನ ಕರೋನಾಕ್ಕೆ ಬಲಿಯಾಗಿದ್ದು ಸಾವು ಮತ್ತು ಸೋಂಕಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ.

ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 366 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 2 ಜನ ಕೊರೋನಾಗೆ ಬಲಿಯಾಗಿದ್ದಾರೆ.

ಜಿಲ್ಲಾಡಳಿತದ ವರದಿ ಪ್ರಕಾರ ಕಾರವಾರದಲ್ಲಿ 35, ಅಂಕೋಲಾದಲ್ಲಿ 1, ಕುಮಟಾದಲ್ಲಿ 105, ಹೊನ್ನಾವರ 39, ಭಟ್ಕಳದಲ್ಲಿ 21, ಶಿರಸಿಯಲ್ಲಿ 56, ಸಿದ್ದಾಪುರದಲ್ಲಿ 34, ಯಲ್ಲಾಪುರದಲ್ಲಿ 15, ಮುಂಡಗೋಡ 30, ಹಳಿಯಾಳದಲ್ಲಿ 14, ಮತ್ತು ಜೋಯಿಡಾದಲ್ಲಿ 16 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಮಾರಿಕಾಂಬಾ ದೇವಾಲಯದ ಸೇವಾ ಶುಲ್ಕ ಹಿಂದಿನಂತೆ ಮುಂದುವರಿಕೆ?

ಶಿರಸಿ ಹಾಗೂ ಸಿದ್ದಾಪುರದಲ್ಲಿ ಒಂದು ಸಾವು ಸಂಭವಿಸಿದೆ ಸಾವಿನ ಸಂಖ್ಯೆ ಒಟ್ಟು 652 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 3599 ಆಗಿದ್ದು, ಅವರಲ್ಲಿ 437 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 3162 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 29, ಅಂಕೋಲಾ‌ 21, ಕುಮಟಾ 131, ಹೊನ್ನಾವರ 49, ಭಟ್ಕಳ 45, ಶಿರಸಿ 158, ಸಿದ್ದಾಪುರ 123, ಯಲ್ಲಾಪುರ 51, ಮುಂಡಗೋಡ 39, ಹಳಿಯಾಳ 77, ಜೋಯ್ಡಾ 36 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 759 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಪುಲ್ವಾಮದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರು ಸಾವು

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.