ಬೆಂಗಳೂರು : ಚಲನಚಿತ್ರ ನಟ ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮಾಜದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು, ಬ್ರಾಹ್ಮಣ ಸಮಾಜವನ್ನು ಭಯೋತ್ಪಾದಕರ ಜೊತೆ ಹೋಲಿಕೆ ಮಾಡಿ ಮಾತನಾಡಿರುತ್ತಾರೆ. ಇದು ನಾಡಿನಲ್ಲಿ ಅಶಾಂತಿಗೆ ಕಾರಣವಾಗಬಹುದಾಗಿದ್ದು, ಅವರ ಹೇಳಿಕೆಗಳನ್ನು ಖಂಡಿಸುತ್ತಾ; ಅವರು ತಕ್ಷಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆ ಆಗ್ರಹಿಸಿದೆ.
ಭಾರತೀಯ ಪರಂಪರೆ ಹಾಗೂ ಬ್ರಾಹ್ಮಣ ಸಮಾಜದ ಕುರಿತಾಗಿ ಚೇತನ್ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದು ಸಮಸ್ತ ಸಮಾಜಕ್ಕೆ ಬೇಸರವನ್ನುಂಟು ಮಾಡಿದೆ. ಪ್ರಚಾರಕ್ಕೋಸ್ಕರವಾಗಿ ಸಮಾಜದಲ್ಲಿ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಹೇಳಿಕೆಗಳು ಶಿಕ್ಷಾರ್ಹವಾಗಿದೆ.
ಚೇತನ್ ಅವರು ಈ ತಕ್ಷಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಗೆ ಧಕ್ಕೆತರುವ ಹೇಳಿಕೆಗಳನ್ನು ನೀಡಬಾರದು ಎಂದು ಮಹಾಸಭೆ ಆಗ್ರಹಿಸುತ್ತದೆ. ಸರ್ಕಾರವು ಈ ಕುರಿತು ಗಮನ ಹರಿಸಬೇಕಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಸಿಎ. ವೇಣುವಿಘ್ನೇಶ್ ಸಂಪ
ಪ್ರಧಾನ ಕಾರ್ಯದರ್ಶಿಗಳು ಶ್ರೀ ಅಖಿಲ ಹವ್ಯಕ ಮಹಾಸಭಾ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.