ಕೊರೋನಾ ಪ್ರಮಾಣದಲ್ಲಿ ತಕ್ಕಮಟ್ಟಿನ ಇಳಿಕೆಯಾಗುತ್ತಿದೆ. ಜನತೆ ಸಹಜ ಸ್ಥಿತಿಯ ನಿರೀಕ್ಷೆಯಲ್ಲಿದ್ದಾರೆ. ಕೊರೋನಾ ಸಂಕಷ್ಟ ಕಳೆದು ಮತ್ತೆ ಸಹಜ ಬದುಕಿನ ಕನಸು ಎಲ್ಲರದ್ದೂ ಇದೆ. ಇದರ ಮಧ್ಯೆ ಜೂನ್ 14 ರ ನಂತರ ಮುಂದೇನು ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ. ಕೊರೋನಾ ನಿಯಂತ್ರಣಕ್ಕಾಗಿ ವಿಧಿಸಿದ ಲಾಕ್ ಡೌನ್ ತೆರವಾಗುವಾಗುತ್ತೋ ಅಥವಾ ಅನ್ ಲಾಕ್ ಪ್ರಕ್ರಿಯೆ ಹೇಗೆ ಎಂಬ ಬಗ್ಗೆ ನಿಖರ ಮಾಹಿತಿ ಸಿಗದಿದ್ದರೂ 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ಯಾವ ರೀತಿ ತೆರೆಯುವುದು, ಮೊದಲ ಹಂತದಿಂದ ಯಾವುದಕ್ಕೆಲ್ಲಾ ವಿನಾಯ್ತಿ ನೀಡುತ್ತಾ ಹೋಗುವುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ, ಜೂನ್ 14ಕ್ಕೆ ಲಾಕ್ ಡೌನ್ ಮುಕ್ತಾಯವಾಗಿ ಅನ್ ಲಾಕ್ ಏಕಾಏಕಿ ಒಂದೇ ಸಲಕ್ಕೆ ಅನ್ ಲಾಕ್ ಆಗುವುದಿಲ್ಲ, ಆ ರೀತಿ ಜನರು ಭಾವಿಸಬೇಡಿ, ಒಂದೇ ಸಲಕ್ಕೆ ತೆರೆದರೆ ಮತ್ತೆ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

RELATED ARTICLES  ಸ್ಯಾಂಡಲ್ ವುಡ್ ನಿರ್ದೇಶಕ,ನಟ ಎ. ಆರ್. ಬಾಬು ವಿಧಿವಶ.

ಲಾಕ್ ಡೌನ್ ಸಂದರ್ಭದಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೊದಲ ಹಂತದಲ್ಲಿ ಖರೀದಿಗೆ ಅವಕಾಶ ವಿಸ್ತರಿಸಣೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ, ಪಾರ್ಕ್ ಗಳಲ್ಲಿ ವಾಕಿಂಗ್ ಗೆ ಅವಕಾಶ ನೀಡುವುದು ಹೀಗೆ ಹಂತ ಹಂತವಾಗಿ ಅನ್ ಲಾಕ್ ಮಾಡುವ ಯೋಜನೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ ಎಂದರು.

RELATED ARTICLES  ದೇವೇಗೌಡರ ನಿವಾಸದಲ್ಲಿ ಹೆಚ್.ಡಿ.ರೇವಣ್ಣ ಅರೆಸ್ಟ್..!

ಅಂತರ್ ಜಿಲ್ಲೆ ಓಡಾಟ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಯಾವ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಿರುತ್ತದೆಯೋ ಅಲ್ಲಿ ಹಂತಹಂತವಾಗಿ ಅನ್ ಲಾಕ್ ನಡೆಸಲಾಗುವುದು. ಅಂತರ ಜಿಲ್ಲೆ, ಸಾರಿಗೆ ವ್ಯವಸ್ಥೆ ಓಡಾಟ ಆರಂಭ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ, ಅನ್ ಲಾಕ್ ಏಕಾಏಕಿ ತೆಗೆಯಲು ಸಾಧ್ಯವಿಲ್ಲ, ನಿರ್ಬಂಧ ಸಡಿಲಿಸುತ್ತಾ ಹೋದಂತೆ ಸೋಂಕು ಹರಡುವ ಪ್ರಮಾಣ ಕೂಡ ನೋಡಬೇಕಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದರು.

ಬೆಂಗಳೂರು ನಗರದಲ್ಲಿ ಪ್ರಸ್ತುತ 2 ಸಾವಿರದಷ್ಟು ಸಕ್ರಿಯ ಕೊರೋನಾ ಕೇಸುಗಳಿವೆ, ಅದು 500ರೊಳಗೆ ಬರಬೇಕು, ಅಂತಿಮವಾಗಿ ಮುಖ್ಯಮಂತ್ರಿಗಳೇ ಅನ್ ಲಾಕ್ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.