ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಜೂ.14 ರಿಂದ 21 ವರೆಗೆ ಬೆಳಗ್ಗೆ 6 ರಿಂದ ಮಧ್ಯಾನ 2 ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಮಾಡಿಕೊಡಲಾಗಿದೆಯಾದರೂ ಉತ್ತರಕನ್ನಡದಲ್ಲಿ ಆ ಅನುಮತಿಸಲಾದ ಚಟುವಟಿಕೆಗಳು ಬೆಳಿಗ್ಗೆ 08 ರಿಂದ 2 ಗಂಟೆಯವರೆಗೆ ಇರುತ್ತದೆ. ಇನ್ನುಳಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ ಬಗ್ಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ನವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಗೂಗಲ್ ಮೀಟ್ ಮೂಲಕ ಮಾಹಿತಿ ನೀಡಿದ ಅವರು ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ ಡೌನ್ ಮುಂದುವರೆಯಲಿದೆ.
ಜಿಲ್ಲೆಯಾಧ್ಯಾಂತ ನೈಟ್ ಕರ್ಫೂ ಮುಂದುವರಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES  ನಾಳೆ ಲಭ್ಯವಿರುವ ಕೋವಿಡ್ ಲಸಿಕೆಗಳ ವಿವರ

ಜಿಲ್ಲೆಯ ಮೈಕ್ರೋ ಕಂಟೈನ್ಮೆಂಟ್ ಝೋನ್ ನಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಹಾಗೂ ಸ್ಥಳೀಯ ಆಡಳಿತ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಲಿದೆ‌.

RELATED ARTICLES  ವಿಜಯಾ ಬ್ಯಾಂಕ್ ನಲ್ಲಿ ನೇಮಕಾತಿ.

ಮುಂದಿನ ಆದೇಶದ ವರೆಗೆ ಮದುವೆ ಹಾಗೂ ಯಾವುದೇ ಸಮಾರಂಭಕ್ಕೆ ಅನುಮತಿ ಇಲ್ಲ. ಗೋವಾ-ಕರ್ನಾಟಕ ಗಡಿಯಲ್ಲಿ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಲ್ಲ, ಪಾರ್ಕ ಗಳಲ್ಲಿ ಬೆಳಗ್ಗೆ 5 ರಿಂದ 10 ಘಂಟೆ ವರೆಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.ಜಿಲ್ಲಾ ಗಡಿಯಲ್ಲಿ ತಪಾಸಣೆ ಮುಂದುವರಿಯಲಿದೆ. ಜನ ಹೆಚ್ಚು ಸೇರದಂತೆ ನಿಯಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನೇನು ಇರುತ್ತೆ : ಇಲ್ಲಿದೆ ಮಾಹಿತಿ.

Screenshot 2021 0613 131415 682x1024 1

 

ಜಿಲ್ಲಾಡಳಿತದ ಆದೇಶ ಪ್ರತಿ ಇಲ್ಲಿದೆ.

Screenshot 20210613 124702 768x1015 1

TextMaster 06 13 12.49.57 768x1171 1