ಕುಮಟಾ: ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿರುವ ರೈತ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ತಾಲೂಕಿನ ಮೂರೂರು ಸಮೀಪದ ನೆಲ್ಲಿಕೇರಿಯಲ್ಲಿ ಈ ಘಟನೆ ನಡೆದಿದ್ದು ರೈತ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.
ಕಾಲುಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ರೈತ ರೈತ ಮೂರೂರು ನೆಲ್ಲಿಕೇರಿಯ ನಿವಾಸಿ ನಾಗು ಜಟ್ಟು ಗೌಡ ಎಂದು ಗುರುತಿಸಲಾಗಿದೆ.
ಈತನು ನಿನ್ನೆ ಕೃಷಿ ಕಾರ್ಯಕ್ಕಾಗಿ ತೋಟಕ್ಕೆ ಹೋಗಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೋಟಕ್ಕೆ ಕೆಲಸಕ್ಕೆ ಹೋದ ನಾಗು ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಯವರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರು.
ಇಂದು ಭಾನುವಾರ ತೋಟದ ಬಾವಿಯಲ್ಲಿ ನಾಗುವಿನ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕುಮಟಾ ಪೊಲೀಸ್ ಠಾಣೆ ಪಿ.ಎಸ್.ಐ ರವಿ ಗುಡ್ಡಿ ನೇತೃತ್ವದ ಪೊಲೀಸ್ ಸಿಬ್ಬಂದಿಯು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಣ್ಣಪುಟ್ಟ ತೋಟದ ಕೆಲಸ ಮಾಡಿಕೊಂಡಿದ್ದ ರೈತ ಇದೀಗ ಕೊನೆಯುಸಿರೆಳೆಯುವುದು ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.