ಕಾರವಾರ : ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ 193 ಜನರಲ್ಲಿ ಪಾಸಿಟಿವ್ ವರದಿಯಾಗಿದೆ. 3 ಜನ ಕರೋನಾಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ.

ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 193 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 3 ಜನ ಕೊರೋನಾಗೆ ಬಲಿಯಾಗಿದ್ದಾರೆ.

ಕಾರವಾರದಲ್ಲಿ 30, ಅಂಕೋಲಾದಲ್ಲಿ 8, ಕುಮಟಾದಲ್ಲಿ 23, ಹೊನ್ನಾವರ 29, ಭಟ್ಕಳದಲ್ಲಿ 13, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 15, ಯಲ್ಲಾಪುರದಲ್ಲಿ 12, ಮುಂಡಗೋಡ 21, ಹಳಿಯಾಳದಲ್ಲಿ 30, ಮತ್ತು ಜೋಯಿಡಾದಲ್ಲಿ 6 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ

ಹೊನ್ನಾವರದಲ್ಲಿ ಒಂದು ಸಾವು ಹಾಗೂ ಶಿರಸಿಯಲ್ಲಿ 2ಸಾವು ಸಂಭವಿಸಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದಂತೆ ಒಟ್ಟು 3 ಸಾವು ಸಂಭವಿಸಿದೆ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 2479 ಆಗಿದ್ದು, ಅವರಲ್ಲಿ 258 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 2221 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 34, ಅಂಕೋಲಾ‌ 5, ಕುಮಟಾ 58, ಹೊನ್ನಾವರ 47, ಭಟ್ಕಳ 38, ಶಿರಸಿ 39, ಸಿದ್ದಾಪುರ 22, ಯಲ್ಲಾಪುರ 0, ಮುಂಡಗೋಡ 24, ಹಳಿಯಾಳ 8, ಜೋಯ್ಡಾ 0 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 275 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮಾನ್ಸ್) ಯು ವಿವಿಧ ಹುದ್ದೆಗಳಿಗೆ ನೇಮಕಾತಿ.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.