ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 200 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.
ಕಾರವಾರದಲ್ಲಿ 28, ಅಂಕೋಲಾದಲ್ಲಿ 14, ಕುಮಟಾದಲ್ಲಿ 41, ಹೊನ್ನಾವರ 36, ಭಟ್ಕಳದಲ್ಲಿ 16, ಶಿರಸಿಯಲ್ಲಿ 28, ಸಿದ್ದಾಪುರದಲ್ಲಿ 3, ಯಲ್ಲಾಪುರದಲ್ಲಿ 8, ಮುಂಡಗೋಡ 12, ಹಳಿಯಾಳದಲ್ಲಿ 9, ಮತ್ತು ಜೋಯಿಡಾದಲ್ಲಿ 5 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಹೊನ್ನಾವರದಲ್ಲಿ ಒಂದು ಸಾವು ಸಂಭವಿಸಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ. ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 2303 ಆಗಿದ್ದು, ಅವರಲ್ಲಿ 231 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 2072 ಸೋಂಕಿತರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಕಾರವಾರ 31, ಅಂಕೋಲಾ 32, ಕುಮಟಾ 47, ಹೊನ್ನಾವರ 53, ಭಟ್ಕಳ 19, ಶಿರಸಿ 83, ಸಿದ್ದಾಪುರ 11, ಯಲ್ಲಾಪುರ 29, ಮುಂಡಗೋಡ 11, ಹಳಿಯಾಳ 30, ಜೋಯ್ಡಾ 29 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 375 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.
ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.