ಹೊನ್ನಾವರ : ಜೂನ್ ಪ್ರಾರಂಭದ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಹವಾಮಾನ ಇಲಾಖೆ ಇನ್ನೂ ಹೆಚ್ಚಿನ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗುಂಡಬಾಳ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ .ಜೂನ್ ಎರಡನೇ ವಾರದಲ್ಲಿ ಇತ್ತೀಚಿನ ವರ್ಷದಲ್ಲಿ ನದಿ ಭರ್ತಿಯಾಗಿ ನೆರೆ ಭೀತಿ ಎದುರಾಗಿರುವುದು ಆತಂಕ ಮೂಡಿಸಿದೆ ಇನ್ನೂ ಎರಡು ದಿನ ಮಳೆ, ಮುಂದುವರೆಯುವ ಸಾಧ್ಯತೆ ಇರುದ ರಿಂದ ತಗ್ಗು ಪ್ರದೇಶದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಗುಂಡಬಾಳ, ಚಿಕ್ಕ ನ ಕೋಡ್ ,ಕೆಂಚಗಾರ ,ಹಾಡಗೇರಿ ,ಖರ್ವಾ,ನಾಥಗೇರಿ ಭಾಗದಲ್ಲಿ ನೆರೆ ಭಿತಿ ಕಾಡಲು ಆರಂಭಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಜೂನ್ 3ರ ನಂತರ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ಈಗ ಮುಂಗಾರು ಅಬ್ಬರ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಜೂನ್ ಎರಡನೇ ಮತ್ತು ಮೂರನೇ ವಾರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಕೆಲವು ದಿನ ಮಳೆ ಮುಂದುವರೆಯುವ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.