ಬೆಂಗಳೂರು : ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಗದಗ, ರಾಯಚೂರು, ಕಲಬುರಗಿ, ಬೀದರ್, ಬೆಂಗಳೂರು, ಯಾದಗಿರಿ ಸೇರಿ 16 ಜಿಲ್ಲೆಗಳಲ್ಲಿ ಅನ್ಲಾಕ್ ಮಾಡಲಾಗಿದೆ.

ಒಂದು ವಾರದಿಂದ ಶೇ.5 ಕ್ಕಿಂತ ಕಡಿಮೆ ಪಾಸಿಟಿವ್ ವಿರುವ ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗಿದ್ದು ಉಳಿದ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ.

ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ಮುಖ್ಯಮಂತ್ರಿಗಳು ಚರ್ಚಿಸಿ ಈ ಘೋಷಣೆ ಮಾಡಿದ್ದಾರೆ.

ಯಾವೆಲ್ಲಾ ವಿದಧ ಸಡಿಲಿಕೆಗಳಿಗೆ ಎಂಬ ವಿವರ ಇಲ್ಲಿದೆ.

RELATED ARTICLES  ಆಧಾರ್ ಕಾರ್ಡ್ ಲಿಂಕ್ ಮಾಡಲು ಕರೆ ಬಂದರೆ ಎಚ್ಚರ! ಯುವಕನಿಗೆ ಬಿತ್ತು 75,000 ರೂ ನಾಮ

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

RELATED ARTICLES  2019ರ ಒಳಗಾಗಿ ಭಾರತದಲ್ಲಿ ಡೆಂಗಿ ಜ್ವರಕ್ಕೆ ಲಸಿಕೆ ದೊರೆಯಲಿದೆ!

• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯಲಿದೆ.

ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.

• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.