ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 133 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಕೊರೋನಾಗೆ ಬಲಿಯಾಗಿದ್ದಾರೆ.

ಕಾರವಾರದಲ್ಲಿ 12, ಅಂಕೋಲಾದಲ್ಲಿ 6, ಕುಮಟಾದಲ್ಲಿ 29, ಹೊನ್ನಾವರ 29, ಭಟ್ಕಳದಲ್ಲಿ 8, ಶಿರಸಿಯಲ್ಲಿ 21, ಸಿದ್ದಾಪುರದಲ್ಲಿ 4, ಯಲ್ಲಾಪುರದಲ್ಲಿ 16, ಮುಂಡಗೋಡ 6, ಹಳಿಯಾಳದಲ್ಲಿ 2, ಮತ್ತು ಜೋಯಿಡಾದಲ್ಲಿ 0 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಕುಮಟಾ 1, ಸಿದ್ದಾಪುರ 2, ಮುಂಡಗೋಡ 1 ಸಾವು ಸಂಭವಿಸಿದೆ. ಒಟ್ಟೂ 4 ಸಾವಿನೊಂದಿಗೆ ಜಿಲ್ಲೆಯ ಒಟ್ಟು ಸಾವಿನ ಸಂಖ್ಯೆ 691 ಆಗಿದೆ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1358 ಆಗಿದ್ದು, ಅವರಲ್ಲಿ 154 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 1204 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 29, ಅಂಕೋಲಾ‌ 9, ಕುಮಟಾ 24, ಹೊನ್ನಾವರ 53, ಭಟ್ಕಳ 21, ಶಿರಸಿ 29, ಸಿದ್ದಾಪುರ 2, ಯಲ್ಲಾಪುರ 17, ಮುಂಡಗೋಡ 21, ಹಳಿಯಾಳ 25, ಜೋಯ್ಡಾ 0 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 230 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.

ಜನತೆಗೆ ಗುಡ್ ನ್ಯೂಸ್ 

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರು ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಯಲ್ಲಿ ಕೆಲವು ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಆದೇಶದಲ್ಲಿ ಜಿಲ್ಲೆಯಲ್ಲಿ ಮದುವೆ ಸಮಾರಂಭಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಮನೆಯಲ್ಲಿ 20 ಜನರಿಗೆ ಮೀರದಂತೆ ಸ್ಥಳೀಯ ಆಡಳಿತದ ಅನುಮತಿ ಪಡೆದು ನಡೆಸಬಹುದಾಗಿದೆ.

ಜಿಲ್ಲೆಯಲ್ಲಿ ಯಾವುದೇ ಪ್ರದೇಶದಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಇಂತಹ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಿ ಈ ಪ್ರದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಆದೇಶಿಸಲಾಗಿದೆ.

ಉಳಿದಂತೆ ರಾಜ್ಯ ಹೊರಡಿಸಿದ ಅನ್ ಲಾಕ್ ನಿಯಮದಂತೆ ಜಿಲ್ಲೆಯಲ್ಲಿ ನಿಯಮಗಳು ಜಾರಿ ಇರಲಿದೆ.