ಕಾರವಾರ : ಕಾರವಾರದ ಜಿಲ್ಲಾ ರಂಗ ಮಂದಿರದಲ್ಲಿ ವಿಶ್ವದ ಅತಿ ದೊಡ್ಡ ಉಚಿತ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಲಾಯಿತು.
ಕೋವಿಡ್-19ರ ಸೋಂಕು ತಡೆಯಲು ನಮ್ಮ ದೇಶ ಮಹತ್ವದ ಸಾಧನೆಯನ್ನು ಮಾಡಿದೆ. ವಿಶ್ವಕ್ಕೆ ಲಸಿಕೆಯನ್ನು ಪರಿಚಯಿಸಿದ ಕೀರ್ತಿ ನಮ್ಮ ದೇಶಕ್ಕೆ ಸಲ್ಲುತ್ತದೆ. ಹೆಚ್ಚೆಚ್ಚು ಜನರು ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿದೆ. ಕೋವಿಡ್-19 ತೊಲಗಿಸಲು ಲಸಿಕೆ ಪಡೆದುಕೊಳ್ಳುವುದು ಮುಖ್ಯವಾಗಿದೆ.
ಕಾರವಾರದಲ್ಲಿ 28 ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಆರಂಭವಾಗಿದೆ. ಸುಮಾರು 5 ಸಾವಿರಕ್ಕೂ ಹೆಚ್ಚು ಜನರಿಗೆ ಇಂದು ಲಸಿಕೆಯನ್ನು ನೀಡಲು ಚಾಲನೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟು ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದವರು ಈಗ ಮುಂಚೂಣಿಯಲ್ಲಿದ್ದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು.
ಲಾಕ್‌ಡೌನ್ ತೆರವು ಆಗಿದೆ ಎಂದು ಅನಾವಶ್ಯಕವಾಗಿ ತಿರುಗಾಡಬಾರದು. ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿ, ಉಪಾವಿಭಾಗಧಿಕಾರಿ ಉಪಸ್ಥಿತರಿದ್ದರು.