ಯಲ್ಲಾಪುರ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಲಾರಿಗಳು ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಚಾಲಕರು ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಯಲ್ಲಾಪುರ ತಾಲೂಕಿನ ಇಡಗುಂದಿ ಸಮೀಪ ರಾಮಲಿಂಗೇಶ್ವರ ದೇವಸ್ಥಾನದ ಸನಿಹದಲ್ಲಿ ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.
ಎರಡು ಲಾರಿಗಳ ನಡುವೆ ನಡೆದ ಅಫಘಾತದ ರಬಸಕ್ಕೆ ಒಂದು ಲಾರಿ ಹೆದ್ದಾರಿಯ ಪಕ್ಕದಲ್ಲಿರುವ ಗದ್ದೆಗೆ ಉರುಳಿಬಿದ್ದಿದ್ದು ಘಟನೆಯನ್ನು ಜನರ ಮನದಲ್ಲಿ ಭಯ ಹುಟ್ಟಿಸಿತ್ತು.
ಅಪಘಾತವಾದ ಇನ್ನೊಂದು ಲಾರಿ ರಸ್ತೆಯ ಮೇಲೆ ಉರುಳಿಬಿದ್ದಿದೆ. ಆದರೆ ಲಾರಿ ಸಂಪೂರ್ಣವಾಗಿ ಜಖಂ ಆದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾಲಕ ಮತ್ತು ಕ್ಲೀನರ್ ಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗತ್ಯ ಕಾರ್ಯಾಚರಣೆ ಕೈಗೊಂಡಿದ್ದಾರೆ.