ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಕಳೆದ ಎರಡು ಮೂರು ತಿಂಗಳಿನಿಂದ ಅತಿ ಕಡಿಮೆ ಪ್ರಕರಣ ಇಂದು ವರದಿಯಾಗಿದೆ. ಇದು ಉತ್ತರ ಕನ್ನಡದ ಜನತೆಗೆ ಸಮಾಧಾನ ತರುವ ಸುದ್ದಿಯಾಗಿದೆ.

ಕಾರವಾರದಲ್ಲಿ 5, ಅಂಕೋಲಾದಲ್ಲಿ 0, ಕುಮಟಾದಲ್ಲಿ 13, ಹೊನ್ನಾವರ 3, ಭಟ್ಕಳದಲ್ಲಿ 2, ಶಿರಸಿಯಲ್ಲಿ 2, ಸಿದ್ದಾಪುರದಲ್ಲಿ 3, ಯಲ್ಲಾಪುರದಲ್ಲಿ 9, ಮುಂಡಗೋಡ 1, ಹಳಿಯಾಳದಲ್ಲಿ 1, ಮತ್ತು ಜೋಯಿಡಾದಲ್ಲಿ 0 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಶ್ರೀ ದುರ್ಗಾಪರಮೇಶ್ವರಿ ಹೈಸ್ಕೂಲ್ ಧರ್ಮತ್ತಡ್ಕದಲ್ಲಿ ವಿಶ್ವ ಪರಿಸರ ದಿನಾಚರಣೆ

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 637 ಆಗಿದ್ದು, ಅವರಲ್ಲಿ 99 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 538 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 4, ಅಂಕೋಲಾ‌ 8, ಕುಮಟಾ 13, ಹೊನ್ನಾವರ 17, ಭಟ್ಕಳ 12, ಶಿರಸಿ 18, ಸಿದ್ದಾಪುರ 1, ಯಲ್ಲಾಪುರ 29, ಮುಂಡಗೋಡ 9, ಹಳಿಯಾಳ 9, ಜೋಯ್ಡಾ 0 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 111 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ವಿದ್ಯಾರ್ಥಿಯ ಅಂತಃ ಸತ್ವದ ಅನಂತ ಸಾಧ್ಯತೆಯನ್ನು ಅನಾವರಣಗೊಳಿಸಲು ಶಿಕ್ಷಕನ‌ನ್ನು ಸಿಧ್ದಗೊಳಿಸುವುದೇ ಶಿಕ್ಷಕರ ತರಬೇತಿಯ ಮೂಲ ಉದ್ದೇಶ :ಪ್ರಮೋದ ಪಂಡಿತ

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.