ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 59 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.

ಮೂವರು ಸಾವನ್ನಪ್ಪಿದ ಬಗ್ಗೆ ವರದಿಯಾಗಿದ್ದು, ಕಾರವಾರ, ಅಂಕೋಲಾ, ಹೊನ್ನಾವರದಲ್ಲಿ ಒಂದೊಂದು ಸಾವಾಗಿದೆ.

ಕಾರವಾರದಲ್ಲಿ 9, ಅಂಕೋಲಾದಲ್ಲಿ 1, ಕುಮಟಾದಲ್ಲಿ 18, ಹೊನ್ನಾವರ 15, ಭಟ್ಕಳದಲ್ಲಿ 7, ಶಿರಸಿಯಲ್ಲಿ 4, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 1, ಮುಂಡಗೋಡ 3, ಹಳಿಯಾಳದಲ್ಲಿ 0, ಮತ್ತು ಜೋಯಿಡಾದಲ್ಲಿ 0 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ನಿನ್ನೆಯೂ ಸಾವಿರದ ಸನಿಹಕ್ಕೆ ಬಂದ ಕೊರೋನಾ ಸೋಂಕಿತರ ಸಂಖ್ಯೆ

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 559 ಆಗಿದ್ದು, ಅವರಲ್ಲಿ 71 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 488 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 14, ಅಂಕೋಲಾ‌ 5, ಕುಮಟಾ 14, ಹೊನ್ನಾವರ 21, ಭಟ್ಕಳ 9, ಶಿರಸಿ 6, ಸಿದ್ದಾಪುರ 6, ಯಲ್ಲಾಪುರ 3, ಮುಂಡಗೋಡ 7, ಹಳಿಯಾಳ 5, ಜೋಯ್ಡಾ 6 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 96 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಕರ್ನಾಟಕವನ್ನು ಕಾಂಗ್ರೆಸ್ ಸಂಸ್ಕೃತಿಯಿಂದ ಮುಕ್ತ ಮಾಡಿಯೇ ಸಿದ್ಧ: ಪ್ರಧಾನಿ ಮೋದಿ

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.