ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 49 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.
ಇಬ್ಬರು ಸಾವನ್ನಪ್ಪಿದ ಬಗ್ಗೆ ವರದಿಯಾಗಿದ್ದು, ಅಂಕೋಲಾದಲ್ಲಿಯೇ ಎರಡು ಜನ ಕೊರೋನಾಕ್ಕೆ ಬಲಿಯಾಗಿದ್ದಾರೆ.
ಕಾರವಾರದಲ್ಲಿ 4, ಅಂಕೋಲಾದಲ್ಲಿ 3, ಕುಮಟಾದಲ್ಲಿ 17, ಹೊನ್ನಾವರ 1, ಭಟ್ಕಳದಲ್ಲಿ 7, ಶಿರಸಿಯಲ್ಲಿ 4, ಸಿದ್ದಾಪುರದಲ್ಲಿ 7, ಯಲ್ಲಾಪುರದಲ್ಲಿ 4, ಮುಂಡಗೋಡ 0, ಹಳಿಯಾಳದಲ್ಲಿ 2, ಮತ್ತು ಜೋಯಿಡಾದಲ್ಲಿ 0 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 503 ಆಗಿದ್ದು, ಅವರಲ್ಲಿ 61 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 442 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.
ಕಾರವಾರ 15, ಅಂಕೋಲಾ 3, ಕುಮಟಾ 28, ಹೊನ್ನಾವರ 19, ಭಟ್ಕಳ 13, ಶಿರಸಿ 9, ಸಿದ್ದಾಪುರ 0, ಯಲ್ಲಾಪುರ 11, ಮುಂಡಗೋಡ 5, ಹಳಿಯಾಳ 0, ಜೋಯ್ಡಾ 0 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 103 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಪ್ರಥಮ ಡೋಸ್ ಪಡೆದವರ ಸಂಖ್ಯೆ- 3,81000 ಇದ್ದು ಇಂದಿಗೆ ತುರ್ತಾಗಿ ಎರಡನೇ ಡೋಸ್ ಅಗತ್ಯವಿದ್ದವರ ಸಂಖ್ಯೆ – 3500 ಇದ್ದು ,77000 ಜನ ಈಗಾಗಲೇ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ವ್ಯಾಕ್ಸಿನ್ ಲಭ್ಯತೆ- 1500 ಕೋವಿಡ್ ಶೀಲ್ಡ್ ಇದೆ ಎಂದು ವರದಿಯಾಗಿದೆ.
ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.