ಯಲ್ಲಾಪುರ : ಕಳೆದ ಮೂರ್ನಾಲ್ಕು ವರ್ಷಗಳಿಂದ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಮತ್ತು ಬ್ಯಾಂಕ್ ಕಳ್ಳತನ ಮಾಡಿದ ಆರೋಪಿಯನ್ನು ಕೊನೆಗೂ ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಮನೆಗೆ ನುಗ್ಗಿ ಮನೆಯಲ್ಲಿದ್ದ ಬೆಳ್ಳಿ ಬಂಗಾರದ ಆಭರಣ ಕಳ್ಳತನ ಮಾಡಿದ್ದು, ಈ ಸಂಬoಧ ಪ್ರಕರಣವೊಂದು ದಾಖಲಾಗಿತ್ತು. ಯಲ್ಲಾಪುರದ ಶಾರದಾಗಲ್ಲಿಯ ಶಿಕ್ಷಕ ಚಂದ್ರಶೇಖರ ನರಸಿಂಹ ಹೆಗಡೆಯವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.

RELATED ARTICLES  ಅಲೆಯ ಹೊಡೆತಕ್ಕೆ ಸಿಕ್ಕ ದೋಣಿ ಮುಳುಗಡೆ

ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಕಂಡಿದ್ದಾರೆ. ಧಾರವಾಡ ಮೂಲದ ಹುಲಗಪ್ಪ ಬಂಡಿವಡ್ಡರ(32) ಮತ್ತು ಓರ್ವ ಬಾಲಕನನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಗಳಿಂದ ಸುಮಾರು 42 ಗ್ರಾಂ ತೂಕದ ಬಂಗಾರದ ಆಭರಣಗಳಾದ ಒಂದು ನೆಕ್ಲೆಸ್,ಎರಡು ಉಂಗುರ, ಎರಡು ಕಿವಿಯ ಕುಡುಕು ಮತ್ತು 100 ಗ್ರಾಂ ಬೆಳ್ಳಿಯ ಆಭರಣಗಳು ಒಟ್ಟು ಸುಮಾರು 2 ಲಕ್ಷ 20 ಸಾವಿರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

RELATED ARTICLES  ಪರೀಕ್ಷೆಗಾಗಿ ಪೇಪರ್ ತರಲು ಹೋದ ಬಾಲಕ ಸೈಕಲ್ ಸ್ಕಿಡ್ ಆಗಿ ಬಿದ್ದು ಸಾವು.

ಪ್ರಕರಣದ ಪ್ರಮುಖ ಆರೋಪಿತನೊಬ್ಬನು ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳು ಉತ್ತರಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ, ಭಟ್ಕಳ, ಸಿದ್ದಾಪುರ ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ,ಆನವಟ್ಟಿ ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿ,ಹುಬ್ಬಳ್ಳಿ ಕಡೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.