ಶಿರಸಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ಶಿರಸಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿರಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸೈಕಲ್ ಜಾಥಾ ನಡೆಸಿದರು.

ಸಾಂಕೇತಿಕವಾಗಿ ಸೈಕಲ್ ತುಳಿದು ಪ್ರತಿಭಟನೆಗೆ ಚಾಲನೆ ನೀಡಿದ ಡಿ ಕೆ ಶಿವಕುಮಾರವರ ಹಿಂದೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ತುಳಿದು ಮೆರವಣಿಗೆ ನಡೆಸಿದರು. ಕೆಲವು ಮುಖಂಡರು ಕಾಲ್ನಡಿಗೆಯಲ್ಲಿ ಸಾಗಿದರು.

ಮುಖ್ಯ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆದ ನಂತರ ತೋಟಗಾರ ಕಲ್ಯಾಣ ಮಂಟಪದ ಎದುರು ಜಾಥಾ ಸಮಾಪ್ತಿಗೊಂಡಿತು. ರಸ್ತೆಯುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಡಿ.ಕೆ.ಶಿವಕುಮಾರ್ ಪರವಾಗಿ ಕಾಂಗ್ರೆಸ್ ಪರವಾಗಿ ಅಭಿಮಾನಗಳು ಘೋಷಣೆ ಕೂಗಿದರು.

RELATED ARTICLES  ಪರಿವರ್ತನ ರಥಯಾತ್ರೆ : ಬೃಹತ್‌ ಸಮಾವೇಶಕ್ಕೆ ತಯಾರಿ

ಮಾಜಿ ಸಚಿವ ಹಳಿಯಾಳ ಶಾಸಕರಾದ ಆರ್.ವಿ.ದೇಶಪಾಂಡೆ, ಬಿ.ಕೆ.ಹರಿಪ್ರಸಾದ್, ಪ್ರಶಾಂತ ದೇಶಪಾಂಡೆ, ಸತೀಶ್ ಸೈಲ್, ಮಂಕಾಳು ವೈದ್ಯ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮುಂತಾದ ಉ.ಕ ಜಿಲ್ಲೆಯ ಮುಖಂಡರು ಪಾಲ್ಗೊಂಡಿದ್ದರು.

ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಿಂದ ಡಿ.ಕೆ.ಶಿವಕುಮಾರರವರಿಗೆ ಭವ್ಯ ಸ್ವಾಗತ

ಹೊನ್ನಾವರ : ಕೇಂದ್ರ ಸರಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಶಿರಸಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಹಮ್ಮಿಕೊಂಡಿರುವ ಸೈಕಲ್ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಇಂದು ಉಡುಪಿಯಿಂದ ಹೊನ್ನಾವರ ಮಾರ್ಗದಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ನಗರದ ಶರಾವತಿ ಸರ್ಕಲ್ ಬಳಿ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟಿ, ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ, ಯುವ ಕಾಂಗ್ರೇಸ್ ಅಧ್ಯಕ್ಷ ಸಂದೇಶ ಶೆಟ್ಟಿ, ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಕ್ರೀಯಾ ಶೇಖ್, ಸೇವಾದಳ ಅಧ್ಯಕ್ಷ ಸಂತೋಷ ಮೇಸ್ತ, ಪಕ್ಷದ ಮುಖಂಡರಾದ ದಾಮೋದರ ನಾಯ್ಕ, ಬಾಲಚಂದ್ರ ನಾಯ್ಕ, ಹನೀಫ್ ಶೇಖ್, ಚಂದ್ರಶೇಖರ ಚಾರೋಡಿ, ಉದಯ ಮೇಸ್ತ, ಕೃಷ್ಣ ಹರಿಜನ್, ನೆಲ್ಸನ್ ರೊಡ್ರಗಿಸ್, ಜೋಸೆಫ್ ಡಿಸೋಜಾ, ಗಜು ನಾಯ್ಕ, ಮಂಜು ಖಾರ್ವಿ, ಕೃಷ್ಣ ಮಾರಿಮನೆ, ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೊಂಡು ಸ್ವಾಗತ ಕೋರಿದರು.

RELATED ARTICLES  ಕೊಡಗಿನಲ್ಲಾದ ಪ್ರವಾಹದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಇನ್ನೂ 10ದಿನಗಳಲ್ಲಿ ಮನೆ ನಿರ್ಮಾಣ ಮಾಡಲಾಗುವುದು : ಮುಖ್ಯಮಂತ್ರಿ ಕುಮಾರಸ್ವಾಮಿ.