ಕಾರವಾರ; ಜುಲೈ 15ರ ವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ‌ ಇಲಾಖೆ ನೀಡಿದೆ. ಹೀಗಾಗಿ ಸಾರ್ವಜನಿಕರು, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಗ್ರಾಹಕ-ಸಂವಾದ ಸಭೆ ನಾಳೆ

ಜೋರಾಗಿ ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಅಪಾಯಕಾರಿ ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಸಾರ್ವಜನಿಕರು ಆಶ್ರಯ ಪಡೆಯಬೇಕು. ಯಾವುದೇ ತುರ್ತು ಸೇವೆಗೆಗಾಗಿ 1077 ಹಾಗೂ ವಾಟ್ಸಾಪ್ ನಂ 9483511015 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES  ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ನೇಮಕಾತಿ✍