ಬೆಂಗಳೂರು : ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ 5ನೇ ಸಭೆಯು ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಉಪಸ್ಥಿತರಿದ್ದು, ಸಾಗರಮಾಲಾ ಯೋಜನೆಯಡಿಯಲ್ಲಿ ಕರಾವಳಿ ಭಾಗದಲ್ಲಿ ಬಂದರುಗಳು ನಿರ್ಮಾಣವಾಗುತ್ತಿದ್ದು ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ, ಇದರಿಂದ ಜಿಲ್ಲೆಯ ಹಾಗೂ ರಾಜ್ಯದ ಆರ್ಥಿಕ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ವೇಗದಲ್ಲಿ ಅಭಿವೃದ್ಧಿಯಾಗಲಿದೆ ಎಂಬ ವಿಶ್ವಾಸವನ್ನು ಸಂಸದರು ವ್ಯಕ್ತಪಡಿಸಿದರು.

RELATED ARTICLES  ಬಸ್ ನಿಲ್ದಾಣದಲ್ಲಿ ಕೈಚೀಲದಲ್ಲಿ ಮಗು ಪತ್ತೆ : ನೋಡಿದ ಜನ ಕಂಗಾಲು..!

ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ಅವರನ್ನು ಒಕ್ಕಲೆಬ್ಬಿಸದೇ ಅವರೊಂದಿಗೆ ಸಮನ್ವಯ ಸಾಧಿಸಿಕೊಂಡು ಯೋಜನೆಯನ್ನು ಅನುಷ್ಠಾನ ಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಅಂಕೋಲಾ ತಾಲ್ಲೂಕಿನ ಬೇಲಿಕೇರೆಯಲ್ಲಿ 40 ಮೆಟ್ರಿಕ್ ಟನ್ ಸರಕು ಸಾಮರ್ಥ್ಯದ 3997 ಕೋಟಿ ವೆಚ್ಚದ ಬಂದರು ಹಾಗೂ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ 14 ಮೆಟ್ರಿಕ್ ಟನ್ ಸರಕು ಸಾಮರ್ಥ್ಯದ 1967 ಕೋಟಿ ರೂಪಾಯಿ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದ ಬಂದರನ್ನು ಅಭಿವೃದ್ಧಿಪಡಿಸಲು ಇಂದಿನ ಸಭೆಯಲ್ಲಿಸರಕಾರವು ಹಸಿರು ನಿಶಾನೆ ತೋರಿದೆ.
ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿಯು ಅನುಮೋದನೆ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಮಾನ್ಯ ಮೀನುಗಾರಿಕಾ ಸಚಿವರಾದ ಶ್ರೀ ಎಸ್.ಅಂಗಾರ ಇವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

RELATED ARTICLES  ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀ ಬೆಂಬಲ: ಎಂ.ಬಿ ಪಾಟೀಲ್-ಶ್ರೀಗಳ ಭೇಟಿ