ಯಲ್ಲಾಪುರ: ಕೊರೋನಾದಿಂದ ಉಂಟಾದ ಅವಾಂತರಗಳು ಅಷ್ಟಿಷ್ಟಲ್ಲ. ಒಂದೆಡೆ ಕೊರೋನಾ ಇಂದು ಜನರು ಸಾಯುತ್ತಿದ್ದಾರೆ, ಇನ್ನೊಂದೆಡೆ ಭಯದಿಂದಲೇ ಜನರು ಸಾವಿನ ಹಾದಿ ಹಿಡಿಯುತ್ತಿರುವುದು ಖೇದಕರ ಸಂಗತಿಯಾಗಿದೆ.
ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಹಾಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಶ್ಮಿ ಸುಧೀರ್ ರಾಯ್ಕರ್ ಎಂದು ಗುರುತಿಸಲಾಗಿದೆ.
ಈಕೆ ಕಳೆದ ಹತ್ತು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈಗ ಕೋವಿಡ್ ಬಂದಿದ್ದು, ಇದರಿಂದ ಮನನೊಂದಿದ್ದಳು ಎನ್ನಲಾಗಿದೆ. ಪದೇ ಪದೇ ಕಾಡುವ ಅನಾರೋಗ್ಯದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೊರೋನಾದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಚಾರ ಇದೀಗ ಸುದ್ದಿಯಾಗುತ್ತಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಕಾರ್ಯಗಳನ್ನು ಕೈಗೊಂಡು ಮುಂದಿನ ಪ್ರಕ್ರಿಯೆ ನಡೆಸಲಾಗಿದೆ ಎನ್ನಲಾಗಿದೆ.