ಅಂಕೋಲಾ : ತಾಲೂಕಿನ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ಇವರು ಡಿವೈಎಸ್ಪಿ ಹುದ್ದೆಗೆ ನೇಮಕಗೊಂಡಿದ್ದು, ಜು.19ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಧನ್ಯಾ ನಾಯಕ ಇವರು ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. 2019-20ರಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾದವರು.
ಡಿವೈಎಸ್ಪಿ ಧನ್ಯಾ ಇವರು ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಎನ್ನುವ ಗೌರವಕ್ಕೆ ಪಾತ್ರರಾದವರು.
ಜು.14ರಂದು ಮೈಸೂರು ಕೆಪಿಎ ಆವಾರಣದಲ್ಲಿ ನಡೆದ ನಿರ್ಗಮನ ಪಥಸಂಚಲನ ಬಿಳ್ಕೊಡುಗೆ ಸಮಾರಂಭದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಸರ್ವೋತ್ತಮ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಈ ವೇಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.