ಕಾರವಾರ : 2019 ರ ಜುಲೈನಲ್ಲಿ ತನ್ನ ಮನೆಯ ಸಮೀಪ ಕೂಲಿ ಕೆಲಸ ಮಾಡುವ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಊಟ ಮಾಡಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಎಂದು ಪ್ರಕರಣ ದಾಖಲಾಗಿದ್ದ ಆರೋಪಿಗೆ ಇದೀಗ ಶಿಕ್ಷೆಯಾಗಿದೆ.
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರು ದಂಡ ವಿಧಿಸಿ ಇಲ್ಲಿನ ವಿಶೇಷ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಕಾರವಾರದ ಕೋಡಿ ಭಾಗದ ಸಾಯಿ ಕಟ್ಟ ಅನಿವಾಸಿ ವಿನೋದ್ ಬಾಬನಿ ನಾಯ್ಕ ಶಿಕ್ಷೆಗೊಳಗಾದ ಅಪರಾಧಿ ಎಂದು ವರದಿಯಾಗಿದೆ.
2019 ರ ಜುಲೈನಲ್ಲಿ ತನ್ನ ಮನೆಯ ಸಮೀಪ ಕೂಲಿ ಕೆಲಸ ಮಾಡುವ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಊಟ ಮಾಡಿಸಿ ಲೈಂಗಿಕ ದೌರ್ಜನ್ಯವೆಸಗಿದ. ಪಾಲಕರು ದೂರು ನೀಡಿದ್ದರು. ಆಗಿನ ಡಿವೈಎಸ್ಪಿ ಶಂಕರ್ ಮಾರಿಹಾಳ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಶಿವಾಜಿ ನೆಲವಡೆ ಶಿಕ್ಷೆ ಪ್ರಕಟಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎಸಗುವವರಿಗೆ ಇದೊಂದು ಪಾಠವಾಗಿದ್ದು, ಇಂತಹ ಪ್ರಕರಣಗಳು ನಡೆತದಿರಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.