ಶಿರಸಿ: ಗದ್ದೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ 7 ಮಹಿಳಾ ಕೂಲಿ ಕಾರ್ಮಿಕರಿಗೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಗಾಯಗೊಂಡ ಘಟನೆ ತಾಲೂಕಿನ ಬನವಾಸಿ ಬಳಿ ನಡೆದಿದೆ.
ಬನವಾಸಿಯಲ್ಲಿ ಗದ್ದೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ 7 ಮಹಿಳಾ ಕೂಲಿ ಕಾರ್ಮಿಕರಿಗೆ ಬೊಲೆರೊ ಡಿಕ್ಕಿ ಹೊಡೆದಿದೆ. ಪರಿಣಾಮ 3 ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯ ಗದ್ದೆಯೊಂದರಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಆಗ ಬನವಾಸಿಯಿಂದ ಶಿರಸಿ ಕಡೆಗೆ ಬರುತ್ತಿದ್ದ ಬೊಲೆರೊ ಎದುರಿನಿಂದ ಡಿಕ್ಕಿ ಹೊಡೆದಿದ್ದು, ಚಾಲಕ ತಕ್ಷಣವೇ ಪರಾರಿಯಾಗಿದ್ದಾನೆ. ಸ್ಥಳೀಯರು ಆಂಬುಲೆನ್ಸ್ ಸಹಾಯದಿಂದ ಗಾಯಗೊಂಡ ಮಹಿಳೆಯರನ್ನು ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಂತರ ಗಂಭೀರವಾಗಿ ಗಾಯಗೊಂಡ ಮೂವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಅದರಲ್ಲಿ ಓರ್ವ ಮಹಿಳೆಯ ಸ್ಥಿತಿ ತೀರಾ ಚಿಂತಾಜನಕ ಎಂಬುದು ತಿಳಿದು ಬಂದಿದೆ. ಬನವಾಸಿ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.