ಲೇಖನ : ಆರ್.ಕೆ ಬಾಲಚಂದ್ರ , ಬ್ಯಾಂಕಿಂಗ್ ತಜ್ಞರು ಹಾಗೂ ತರಬೇರುದಾರರು

ಬ್ಯಾಂಕ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 3,300 ಹುದ್ದೆಗಳಿಗೆ ಪೂರ್ವ ಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.ರಾಜ್ಯದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 407 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಯಲಿದೆ.
ಇದರ ಬೆನ್ನಲ್ಲೇ ಸಾಲು-ಸಾಲಾಗಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ. ಸಾಮಾನ್ಯವಾಗಿ ಪದವಿ ಮುಗಿಸಿದ ಅಭ್ಯರ್ಥಿಗಳು ಮೊದಲ ಬಾರಿಗೆ ಈ ಪರೀಕ್ಷೆಗಳನ್ನು ಎದುರಿಸುವಾಗ ಸಹಜವಾಗಿಯೇ ಆತಂಕಗಳು ಎದುರಾಗಿರುತ್ತವೆ. ಇರುವ 407 ಹುದ್ದೆಗಳಿಗೆ ಲಕ್ಷಗಟ್ಟಲೆ ಅಭ್ಯರ್ಥಿಗಳು ಅರ್ಜಿ ಹಾಕಿರ್ತಾರೆ.ಹೀಗಿರುವಾಗ ನನಗೆ ಈ ಹುದ್ದೆಯನ್ನ ಪಡೆಯಲು ಸಾದ್ಯವೇ….? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನ ಕಾಡುತ್ತಿರುತ್ತದೆ.ಇದು ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯನ್ನ ಮೊದಲ ಬಾರಿಗೆ ಬರೆಯುವವರಿಗೆ ಕಾಡುವ ಮಿಲಿಯನ್ ಡಾಲರ್ ಪ್ರಶ್ನೆ. ಇದು ಸಹಜ, ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೂ ಹೀಗೆ ಅನ್ನಿಸಿದ್ದರೆ ಆಶ್ಚರ್ಯ ವಿಲ್ಲ. ಬ್ಯಾಂಕ್ ಕೆಲಸವೆಂದರೆ ಅತ್ಯಂತ ಪ್ರತಿಷ್ಠಿತ ಕೆಲಸವೆಂದೇ ಜನಜನಿತ. ಹೀಗಾಗಿಯೇ ಒಂದು ಹುದ್ದೆ ಖಾಲಿ ಇದ್ದರೂ ಸಾವಿರಾರು ಮಂದಿ ಅರ್ಜಿ ಸಲ್ಲಿಸುತ್ತಾರೆ. ಯಾವುದೇ ಅಧಿಸೂಚನೆ ಪ್ರಕಟವಾದಾಗ ಅರ್ಜಿ ಸಲ್ಲಿಸಿದ ಲಕ್ಷಾಂತರ ಅಭ್ಯರ್ಥಿಗಳಲ್ಲಿ ಕೆಲವೇ ಕೆಲವು ಸಾವಿರ ಜನ ಮಾತ್ರ ಅಂತಿಮ ಸುತ್ತಿಗೆ ಆಯ್ಕೆಯಾಗುತ್ತಾರೆ

ಅರ್ಹತೆ ಏನು?:
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಪರೀಕ್ಷೆ ಬರೆಯಬಹುದು, ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಗೆ ಸರಿಸಮನಾದ ಕೋಸ್೯ ಮಾಡಿದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಯು ಕಂಪ್ಯೂಟರ್ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ, ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ. (ಕಂಪ್ಯೂಟರ್ ಗೆ ಸಂಬಂಧಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ(information technology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಗಮನಿಸಿ, ಪದವಿ ಪೂರ್ಣಗೊಳಿಸಿ ದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ. 20 ವರ್ಷದಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹ ರಾಗಿರುತ್ತಾರೆ.(ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.)

  • ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕ:
    12-07-2021ರಿಂದ 01-08-2021
  • ಪ್ರಿಲಿಮ್ಸ್ ನಡೆಯುವ ದಿನಾಂಕ :* 28-08-2021, 29-08-2021, 04-09-2021
  • ಪ್ರಿಲಿಮ್ಸ್ ಫಲಿತಾಂಶ* ಸೆಪ್ಟೆಂಬರ್/ಅಕ್ಟೋಬರ್, 2021
  • ಮುಖ್ಯ ಪರೀಕ್ಷೆ ನಡೆಯುವ ದಿನಾಂಕ:* 31-10-2021,
  • ಪ್ರಿಲಿಮ್ಸ್‌ ನಡೆಯುವ ಕೇಂದ್ರಗಳು :ಬೆಳಗಾವಿ, ಬೆಂಗಳೂರು, ಬೀದರ್, ಕಲಬುರಗಿ, ದಾವಣಗೆರೆ,ಧಾರವಾಡ, ಹುಬ್ಬಳ್ಳಿ,ಹಾಸನ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
  • ಮೇನ್ಸ್ ನಡೆಯುವ ಕೇಂದ್ರ ಗಳು:* ಬೆಂಗಳೂರು ಹುಬ್ಬಳ್ಳಿ ಹಾಗೂ ಮಂಗಳೂರು
  • ಅರ್ಜಿ ಶುಲ್ಕ: 850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ (inclusive of GST) (ಎಸ್‌ಸಿ/ಎಸ್‌ಟಿ/PWBD/EXSM ಅಭ್ಯರ್ಥಿಗಳಿಗೆ 175 ರೂ.[inclusive of GST]
  • ಆನ್‌ಲೈನ್‌ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.
  • ಅಧಿಸೂಚನೆಯ ಲಿಂಕ್‌: https://www.ibps.in/wp-content/uploads/Advt-_CRP-Xl
  • ಹೆಚ್ಚಿನ ಮಾಹಿತಿಗೆ ವೆಬ್: https://www.ibps.in/

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ?
ಬ್ಯಾಂಕ್ ಆಫ್ ಇಂಡಿಯಾ 12
ಕೆನರಾ ಬ್ಯಾಂಕ್ -140
ಸೆಂಟ್ರಲ್ ಬ್ಯಾಂಕ್ ಆಫ್
ಇಂಡಿಯಾ- 05
ಇಂಡಿಯನ್ ಓವರ್ಸೀಸ್ ಬ್ಯಾಂಕ್-28
ಪಂಜಾಬ್ ಎಂಡ್ ಸಿಂಧ ಬ್ಯಾಂಕ್-೦3
ಯುಕೋ ಬ್ಯಾಂಕ್ 1೦
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ -209
ಒಟ್ಟಾರೆ 407 ಹುದ್ದೆಗಳು*

ಪರೀಕ್ಷೆ ಹೇಗೆ :
ಬ್ಯಾಂಕಿಂಗ್ ಪರೀಕ್ಷೆಗಳು IAS ಹಾಗೂ KAS ಮಾದರಿಯಲ್ಲಿ ಎರಡು ಹಂತಗಳಲ್ಲಿ ನಡೆಯಲಿವೆ. ಪೂರ್ವಭಾವಿ (prelims), ಮುಖ್ಯ ಪರೀಕ್ಷೆ (mains). ಐಬಿಪಿಎಸ್‌ ನ ಗುಮಾಸ್ತ ಹುದ್ದೆಗೆ ಸಂದರ್ಶನ ಇರುವುದಿಲ್ಲ. ಪೂರ್ವಭಾವಿ ಪರೀಕ್ಷೆ ಮೊದಲ ಹಂತದ ಅರ್ಹತಾ ಪರೀಕ್ಷೆಯಾಗಿದ್ದು, ಇದರಲ್ಲಿ ಅಭ್ಯರ್ಥಿಗಳನ್ನು 1:20 ರಂತೆ ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಪೂರ್ವಭಾವಿಯಲ್ಲಿ ಪಡೆದ ಅಂಕಗಳು ಅರ್ಹತಾ ಪಟ್ಟಿಗೆ ಮಾತ್ರ ಮೀಸಲಾಗಿದ್ದು ಅದರಲ್ಲಿ ಪಡೆದ ಅಂಕಗಳನ್ನು ಮುಂದೆ ಪರಿಗಣಿಸಲಾಗುವುದಿಲ್ಲ. ಎರಡೂ ಪರೀಕ್ಷೆಗೂ ಅಷ್ಟೆ ಮಹತ್ವ ನೀಡಬೇಕು ಎಂಬುದನ್ನು ಖಂಡಿತಾ ಮರೆಯದಿರಿ.
ನಿಗದಿತ ದಿನದಂದು ಆನ್ ಲೈನ್‌ನಲ್ಲಿಯೇ ಎರಡೂ ಲಿಖಿತ ಪರೀಕ್ಷೆಗಳು ನಡೆಯಲಿವೆ. ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ 20 ನಿಮಿಷಗಳಂತೆ ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿಯಾಗಿರುತ್ತದೆ ) ಇದರಲ್ಲಿ ಇಂಗ್ಲೀಷ್ ಲಾಂಗ್ವೇಜಗೆ 30, ನ್ಯೂಮರಿಕಲ್ ಎಬಿಲಿಟಿಯ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆ ಯಲ್ಲೂ ಕನಿಷ್ಟ ಅಂಕ ಗಳಿಸೋದರ ಜೊತೆಗೆ ಒಟ್ಟಾರೆ ಅಂಕ ಗಳಿಸುವುದು ಮುಖ್ಯ.

RELATED ARTICLES  ‘ಕಷ್ಟದ ಹೊರತು ಫಲವಿಲ್ಲ’ ಹೀಗೆಂದರು ಶ್ರೀ‍ಧರರು

ಮುಖ್ಯ ಪರೀಕ್ಷೆಯು ಎರಡು ಗಂಟೆ 40 ನಿಮಿಷಗಳ ಕಾಲ ನಡೆಯಲಿದ್ದು, 190 ಪ್ರಶ್ನೆಗಳನ್ನು 200 ಅಂಕಗಳಿಗೆ ಲಿಖಿತ ಪರೀಕ್ಷೆಗಳು ನಡೆಯಲಿವೆ
1 General/ Financial Awareness 50 ಪ್ರಶ್ನೆ 50 ಅಂಕಗಳು 35 ನಿಮಿಷಗಳು
2 General English 40 ಪ್ರಶ್ನೆ 40 ಅಂಕಗಳು 35 ನಿಮಿಷಗಳು.
3 Reasoning Ability & Computer Aptitude 50 ಪ್ರಶ್ನೆ 60 ಅಂಕಗಳು 45 ನಿಮಿಷಗಳು
4 Quantitative Aptitude 50ಪ್ರಶ್ನೆ 50 ಅಂಕಗಳು45 ನಿಮಿಷಗಳು..ಹೀಗೆ ಒಟ್ಟಾರೆ
190 ಪ್ರಶ್ನೆಗಳಿದ್ದು 200 ಅಂಕಗಳು ಹಾಗೂ 160 ನಿಮಿಷದ ಪರೀಕ್ಷೆ ಯಾಗಿದೆ.

ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ಆದರೆ ಬ್ಯಾಂಕ್ ಪರೀಕ್ಷೆ ಅತಿ ಕಡಿಮೆ ಅವಧಿ ಯಲ್ಲಿ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಗುರುತಿಸಬೇಕಿರುತ್ತದೆ. ಅಲ್ಲದೆ ಬಿಡಿಸಿದ ಪ್ರಶ್ನೆಗಳಿಗೆ ಉತ್ತರ ಸರಿಯಾಗಿರಲೇಬೆಕಾದುದು ಬಹಳ ಮುಖ್ಯವಾಗಿರುತ್ತದೆ. ಏಕೆಂದರೆ ಬ್ಯಾಂಕ್ ಪರೀಕ್ಷೆಗಳಲ್ಲಿ ನೆಗೆಟಿವ್ ಮಾಕ್ಸ್ (ಋಣಾತ್ಮಕ ಮೌಲ್ಯಮಾಪನ) ಇರುತ್ತದೆ. ಪದವಿ ಪರೀಕ್ಷೆಗಳಲ್ಲಿ ಇ ರೀತಿಯಾಗಿ ಇರೋದಿಲ್ಲ. ಹಾಗಾಗಿ ಋಣಾತ್ಮಕ ಮೌಲ್ಯಮಾಪನದ ಕುರಿತಂತೆ ಧನಾತ್ಮಕ ಚಿಂತನೆ ಇರಬೇಕಾದುದು ಮೊದಲ ಆದ್ಯತೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆ ಗಳಲ್ಲಿ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು (ಋಣಾತ್ಮಕ ಅಂಕ) ಕಳೆಯಲಾಗುತ್ತದೆ

ಪರೀಕ್ಷೆಯಲ್ಲಿ ನೀವು ಯಶಸ್ವಿಯಾಗಬೇಕಾದರೆ ಎಲ್ಲವನ್ನೂ ಉತ್ತರಿಸುವ ಗೋಜಿಗೆ ಹೋಗದೆ ಗೊತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ಮಾತ್ರ ಗುರುತಿಸಿದರೆ ಸಾಕು, ಅತ್ಯಂತ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ನಿಖರವಾಗಿ ಗೊತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರಿಸಬೇಕಾದದು ಅಗತ್ಯ.

ಈ ಬಾರಿಯ ಬದಲಾವಣೆಗಳೇನು?:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ ಕೆಲವು ಬದಲಾವಣೆಗಳು ಸಾಮಾನ್ಯ. ಹಾಗೆಯೇ ಈ ಬಾರಿಯ ಬದಲಾವಣೆಗಳು ಕೆಳಗಿನಂತಿವೆ:
ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ನೀವು ತರುವ ಐಡಿ ಪ್ರೂಫ್‌ನ ಸಂಖ್ಯೆ ನೀಡುವುದು ಕಡ್ಡಾಯ ಹಾಗೂ ಅದು ನೀವು ಅರ್ಜಿ ಸಲ್ಲಿಸಿದ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಾಗಿ ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳುವ ಆಗತ್ಯವಿದೆ. ಮೇನ್ಸ್ ಪರೀಕ್ಷೆಗೆ ಅರ್ಹಗೊಂಡ ಅಭ್ಯರ್ಥಿಗಳು ಮೇನ್ಸ್ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನು ಕೂಡ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಬಹುದು.

ಗಮನಿಸಿ: ಈ ಹಿಂದಿನ ಪರೀಕ್ಷೆ ಯಲ್ಲಿ ಕೇಳಿರೋದರ ಆಧಾರದ ಮೇಲೆ ಇದನ್ನು ನೀಡಲಾಗಿದೆ.ಪ್ರತಿವರ್ಷವೂ ಸಿಲೇಬಸ್ ಬದಲಾಗುವುದರಿಂದ ಆಗಾಗ ವೆಬ್ ಸೈಟ್ ನ್ನು ಗಮನಿಸುತ್ತಿರಿ

TIPS:
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐ ಬಿ ಪಿ ಎಸ್) ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವವರು ಗಮನಿಸಲೇಬೇಕಾದ ವಿಷಯಗಳ ಮಾಹಿತಿ ಇಲ್ಲಿದೆ:

RELATED ARTICLES  10 ತಿಂಗಳ ಗಂಡು ಮಗುವಿನ ಹೊಟ್ಟೆಯಿಂದ ಮೂರು ಭ್ರೂಣ : ಇದೊಂದು ವಿಶೇಷ ಘಟನೆ.

ಐಬಿಪಿಎಸ್ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇದನ್ನು ಬಿಟ್ಟು ಬೇರೆ ವಿಧಾನದಲ್ಲಿ ಅರ್ಜಿ ಸಲ್ಲಿಸಿದರೆ ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿ ಮತ್ತು ವಿದ್ಯಾರ್ಹತೆಯನ್ನು ಸರಿಯಾಗಿ ಗಮನಿಸಿಕೊಳ್ಳಿ.

ಪರೀಕ್ಷಾ ಅಧಿಸೂಚನೆಯ ಮದ ಅನುಬಂಧ-II [Annexure-il]ರಲ್ಲಿ ಹೇಳಿರುವಂತೆ ನಿಮ್ಮ ಭಾವಚಿತ್ರ ಹಾಗೂ ಸಹಿಯನ್ನು ಮೊದಲೇ ಸ್ಕ್ಯಾನ್ ಮಾಡಿ, ಜಿಪಿಜಿ ಫಾರ್ಮೆಟ್‌ನಲ್ಲಿ ಸೇವ್ ಮಾಡಿಟ್ಟುಕೊಳ್ಳಿ.

ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್‌ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ, ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಮಾಡಿಕೊಳ್ಳಿ.

ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ. ಏಕೆಂದರೆ, ಐಬಿಪಿಎಸ್ ಸಂಸ್ಥೆ ಸಂದರ್ಶನ ಪತ್ರ/ಪರೀಕ್ಷಾ ಸೂಚನ ಪತ್ರ ಹಾಗೂ ಇತರೆ ಮಾಹಿತಿಗಳನ್ನು ವಿಶೇಷ ಸಂದರ್ಭಗಳಲ್ಲಿ ಇ-ಮೇಲ್ ಐ.ಡಿ.ಗೆ ಕಳುಹಿಸುತ್ತದೆ.

ಐಬಿಪಿಎಸ್ ಸಂಸ್ಥೆಯ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಿಟ್ಟುಕೊಂಡು, ಅದರಂತೆ ಮೇಲ್ ಚೆಕ್ ಮಾಡಲು ಮರೆಯಬೇಡಿ, ಯಾವುದೇ ಕಾರಣಕ್ಕೂ ನಿಮ್ಮ ಇ-ಮೇಲ್ ಐ.ಡಿ.ಯನ್ನು ಇತರರೊಂದಿಗೆ ಹಂಚಿಕೊಳ್ಳಬೇಡಿ.

ಆನ್ ಲೈನ್ ಅಪ್ಲಿಕೇಷನ್ ಸಲ್ಲಿಸುವಾಗ save and next – ಅಪ್ಪನ್ ಅನ್ನೇ ಬಳಸಿ ಕೊನೆಯಲ್ಲಿ final submit ಬಟನ್ ಒತ್ತುವ ಮುನ್ನ ಏನಾದರೂ ಡೀಟೇಲ್ ಅನ್ನು ಬದಲಿಸಬೇಕಾದರೆ preview ನಲ್ಲಿ ನೋಡಿ ಬದಲಿಸಲು ಅವಕಾಶವಿದೆ. ಆದರೆ ಯಾವುದೇ ಕಾರಣಕ್ಕೂ ಅಭ್ಯರ್ಥಿಯ ಹೆಸರು, ಹುಟ್ಟಿದ ದಿನಾಂಕ, ಮೊಬೈಲ್‌ ನಂಬರ್‌, ಇ-ಮೇಲ್ ಐ.ಡಿ.ಯಂತಹ basic ಮಾಹಿತಿಯನ್ನು ಬದಲಾಯಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ಮಾಹಿತಿಯನ್ನು ಭರ್ತಿ ಮಾಡುವಾಗ ಎಚ್ಚರಿಕೆಯಿಂದಿರಿ.

ನಿಮ್ಮ ಐ.ಡಿ. ಪ್ರೊಫ್‌ನಲ್ಲಿ ಹಾಗೂ ಇತರೆ ದಾಖಲೆಗಳಲ್ಲಿ ಇರುವಂತೆಯೇ ನಿಮ್ಮ ಮೊದಲ,ಮಧ್ಯದ ಹಾಗೂ ಕೊನೆಯ ಹೆಸರನ್ನು ಅರ್ಜಿ ಸಲ್ಲಿಸುವಾಗ ಭರ್ತಿ ಮಾಡಿ. ಅರ್ಜಿಯಲ್ಲಿನ ಹೆಸರು ದಾಖಲೆಗೆ ಹೊಂದಾಣಿಕೆ ಯಾಗದಿದ್ದರೆ ನಿಮ್ಮನ್ನು ಅನರ್ಹಗೊಳಿಸಲಾಗುತ್ತದೆ.

ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ, ಡಾಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ. ಹೀಗೆ ಮಾಡುವಾಗ ನಿಮ್ಮ ನೋಂದಣಿ ಸಂಖ್ಯೆ ಹಾಗೂ ಪಾಸ್‌ವರ್ಡ್ ಒಂದು ಕಡೆ ಬರೆದಿಟ್ಟುಕೊಳ್ಳಲು ಮರೆಯಬೇಡಿ.

ಆನ್ಲೈನ್ ಅಪ್ಲಿಕೇಷನ್‌ನಲ್ಲಿ ನಾಲ್ಕು ವಿಭಾಗಗಳಿರುತ್ತವೆ. ಮೊದಲನೆಯದ್ದು, ಬೇಸಿಕ್ ಇನ್ಸಾರ್ಮೆಷನ್, ಎರಡನೆಯದ್ದು ಭಾವಚಿತ್ರ ಹಾಗೂ ಸಹಿ, ಮೂರನೆಯದ್ದರಲ್ಲಿ ಮೂರು ವಿಭಾಗಗಳಿದ್ದು, ಮೊದಲ ವಿಭಾಗದಲ್ಲಿ
Category/Date of Birth/Address ಎರಡನೇ ವಿಭಾಗದಲ್ಲಿ ವಿದ್ಯಾರ್ಹತೆ/ಅನುಭವ, ಮೂರನೇ ವಿಭಾಗದಲ್ಲಿ ನೀವು ಆರಿಸಿಕೊಳ್ಳುವ ಬ್ಯಾಂಕನ್ನು ಕ್ರಮವಾಗಿ ಗುರುತಿಸುವುದು ಕಡ್ಡಾಯವಾಗಿರುತ್ತದೆ. ನಿಮಗೆ ಇಷ್ಟವಾದ ಬ್ಯಾಂಕ್ ಅನ್ನು ಮೊದಲು ಗುರುತಿಸಿ, ಏಕೆಂದರೆ ಮುಂದೆ ನೇಮಕಾತಿ ಸಂದರ್ಭದಲ್ಲಿ ನೀವು ಗುರುತಿಸಿದ ಬ್ಯಾಂಕುಗಳಿಗೆ ಮೊದಲ ಆದ್ಯತೆ ನೀಡುತ್ತಾರೆ. ಹಾಗೂ ಕೊನೆಯದ್ದು ಪ್ರಿವ್ಯೂ, ಎಲ್ಲವೂ ಸರಿಯಾಗಿದ್ದರೆ final submit ಬಟನ್ ಒತ್ತಿದ ನಂತರ payment ಡೀಟೇಲ್ಸ್ ನ ಇನ್ನೊಂದು ಅಡಿಷನಲ್ ಪೇಜ್ ಡಿಸ್‌ಪ್ಲೇ ಆಗುತ್ತದೆ.

ಆನ್‌ಲೈನ್‌ನಲ್ಲಿ ಶುಲ್ಕ ಭರಿಸಲು ಕ್ರೆಡಿಟ್ / ಡೆಬಿಟ್ ಕಾರ್ಡ್ ಅನ್ನು ಹಾಗೂ ಪಾಸ್‌ವರ್ಡ್ ಮಾಹಿತಿಯನ್ನು ಮೊದಲೇ ಸಿದ್ಧವಾಗಿಟ್ಟುಕೊಳ್ಳಿ. ನೀಡಲಾಗಿರುವ ಮಾಹಿತಿಯಂತೆ ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.

ಆನ್‌ಲೈನ್ ಪೇಮೆಂಟ್ ಮಾಡುವಾಗ ಪೇಮೆಂಟ್ ಇನ್ವಪಾರ್ಮೇಷನ್ ತುಂಬಿದ ನಂತರ ಸರ್ವ‌್ರನಿಂದ ಮಾಹಿತಿ ದೊರೆಯುವವರೆಗೆ ಕಾಯಿರಿ. ಈ ಸಂದರ್ಭದಲ್ಲಿ back ಅಥವಾ refresh ಬಟನ್ ಬಳಸಬೇಡಿ, ಒಂದು ವೇಳೆ back ಅಥವಾ refresh ಬಟನ್ ಬಳಸಿದರೆ ಗೊಂದಲವಾಗಿ ಎರಡೆರಡು ಸಲ ಶುಲ್ಕ ಪಾವತಿಯಾಗಬಹುದು.

*ಗಮನಿಸಿ:ಕನ್ನಡ ಸೇರಿದಂತೆ 22 ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ನಡೆಸಬೇಕೆಂಬ ಬೇಡಿಕೆಗಳ ಬಗ್ಗೆ ಸಮಗ್ರವಾಗಿ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಈ ಸಮಿತಿಗೆ 15 ದಿನಗಳೊಳಗೆ ಶಿಫಾರಸು ಸಲ್ಲಿಸಲು ಸೂಚಿಸ ಲಾಗಿದ್ದು, ಶಿಫಾರಸು ಸಲ್ಲಿಕೆ ಯಾಗುವ ವರೆಗೂ ಈಗಿನ ನೇಮಕ ಪ್ರಕ್ರಿಯೆಯನ್ನು ತಡೆಹಿಡಿಯ ಲಾಗಿದೆ, ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.