ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು ಕೇವಲ 37 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ. ಇಂದಿನ ಹೆಲ್ತ ಬುಲೆಟಿನ್ ಪ್ರಕಾರ ಇಂದು ಯಾವುದೇ ಸಾವು ಸಂಭವಿಸಿಲ್ಲ.

ಕಾರವಾರದಲ್ಲಿ 0, ಅಂಕೋಲಾದಲ್ಲಿ 4, ಕುಮಟಾದಲ್ಲಿ 12, ಹೊನ್ನಾವರ 10, ಭಟ್ಕಳದಲ್ಲಿ 3, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 0, ಯಲ್ಲಾಪುರದಲ್ಲಿ 0, ಮುಂಡಗೋಡ 0, ಹಳಿಯಾಳದಲ್ಲಿ 1, ಮತ್ತು ಜೋಯಿಡಾದಲ್ಲಿ 1 ಒಟ್ಟೂ 37 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ದಿನಾಂಕ 26/05/2019 ರ ದಿನ ಭವಿಷ್ಯ ಇಲ್ಲಿದೆ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 425 ಆಗಿದ್ದು, ಅವರಲ್ಲಿ 45 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 380 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 5, ಅಂಕೋಲಾ‌ 10, ಕುಮಟಾ 17, ಹೊನ್ನಾವರ 4, ಭಟ್ಕಳ 4, ಶಿರಸಿ 0, ಸಿದ್ದಾಪುರ 0, ಯಲ್ಲಾಪುರ 0, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 40 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿತ

ಹೆಲ್ತ್ ಬುಲೆಟಿನ್ ಪ್ರಕಾರ ಕುಮಟಾದಲ್ಲಿ ಅತಿಹೆಚ್ಚು ಅಂದರೆ 12 ಜನರಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದರೆ, ಅತೀ ಹೆಚ್ಚು ಜನ ಡಿಶ್ಚಾರ್ಜ ಆದವರೂ ಕುಮಟಾದ ಮಂದಿಯೇ ಎಂಬುದು ಸಮಾಧಾನದ ಸಂಗತಿ.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.