ಕುಮಟಾ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ’30 ವರ್ಷ ಹೋರಾಟ- 30 ಸಾವಿರ ಗಿಡ’ ನೆಡುವ ಕಾರ್ಯಕ್ರಮದ ಅಂಗವಾಗಿ ಹೊನ್ನಾವರದಲ್ಲಿ ಜು.23 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಗೇರುಸೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿ ಬಂಗಾರಮಕ್ಕಿ ದೇವಾಲಯದ ಆವರಣದಲ್ಲಿ, ಕುಮಟಾ ತಾಲೂಕಿನಲ್ಲಿ ಜು.24 ಶನಿವಾರ ಮುಂಜಾನೆ 10:30 ಕ್ಕೆ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಕುಳಿಯಲ್ಲಿ ಸಂಘಟಿಸಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಮಂಜುನಾಥ ಮರಾಠಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೂಮಿ ಹಕ್ಕು ಸದ್ರಿ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಅರಣ್ಯ ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಉದ್ಘಾಟಿಸಲಿದ್ದಾರೆ. ಆಸಕ್ತರು ಆಗಮಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.