ಕುಮಟಾ: ಮಳೆಯಿಂದಾಗಿ ಅಕ್ಷರಶಹ ಉತ್ತರ ಕನ್ನಡದ ಜನ ತತ್ತರಿಸುತ್ತಿದ್ದಾರೆ. ಕಳೆದೊಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ಬಹುತೇಕ ಕಡೆ ಸಂಚಾರ ಅಸ್ತವ್ಯಸ್ತವಾಗಿದೆ.
ಇದೀಗ ಕುಮಟಾ ಶಿರಸಿ ರಸ್ತೆ ಸಂಚಾರ ಕೂಡಾ ತಾತ್ಕಾಲಿಕವಾಗಿ ಬಂದ್ ಆಗಿದೆ. ನಿನ್ನೆ ದಿನ ಶಿರಸಿಯ ಹಲವೆಡೆ ನದಿಗಳು ತುಂಬಿ ಜನಜೀವನ ಅಸ್ತವ್ಯಸ್ಥ ವಾಗುವ ಜೊತೆಗೆ ವಾಹನ ಸಂಚಾರ ವ್ಯತ್ಯಯವಾಗಿತ್ತು.
ಭಾರೀ ಮಳೆಯಿಂದಾಗಿ ಕತಗಾಲಿನ ಅಳಕೋಡ್ ಹತ್ತಿರ ರಸ್ತೆ ಮೇಲೆ ನೀರು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಸ್ಥಳದಲ್ಲಿ ಪೊಲೀಸರು ಹಾಗೂ ಇತರ ಅಧಿಕಾರಿಗಳು ಹಾಜರಿದ್ದು, ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.