ಬೆಂಗಳೂರು: ಇವತ್ತೇ ಮಧ್ಯಾಹ್ನ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಇದೇ ವೇಳೆ, ಈ ರಾಜೀನಾಮೆಯನ್ನು ನೋವಿನಿಂದಲ್ಲ, ಸಂತೋಷದಿoದ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಅವರು ಭಾವುಕರಾದ ದೃಶ್ಯ ಕಂಡುಬoತು. ಮತ್ತೆ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ಹೇಳಿದರು. ಸಾಧನಾ ಸಮಾವೇಶದಲ್ಲಿ ಭಾವುಕರಾಗಿ ಮಾತನಾಡಿದರು.
75 ವರ್ಷ ವಯಸ್ಸಾಗಿದ್ರೂ ನನಗೆ ಸಿಎಂ ಸ್ಥಾನ ನೀಡಿ ಸೇವೆ ಸಲ್ಲಿಸಲು ಬಿಜೆಪಿ ಅವಕಾಶ ನೀಡಿದೆ. ಇದಕ್ಕಾಗಿ ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಭಾವುಕರಾಗಿ ಹೇಳಿದರು.
ಬೂಕನಕೆರೆಯಲ್ಲಿ ಹುಟ್ಟಿದ ನಾನು, ಶಿವಮೊಗ್ಗದ ಶಿಕಾರಿಪುರದಿಂದ ರಾಜಕೀಯ ಜೀವನ ಆರಂಭಿಸಿದೆ. ಅಂದು ಮೊದಲ ಬಾರಿಗೆ ಇಬ್ಬರು ಶಾಸಕರಾಗಿ ಆಯ್ಕೆಯಾಗಿದ್ದೇವು. ಆದರೆ ನನ್ನ ಜೊತೆಯಲ್ಲಿದ್ದ ಮತ್ತೊಬ್ರು ರಾಜೀನಾಮೆ ನೀಡಿದಾಗ ಏಕಾಂಗಿಯಾಗಿ ಹೋರಾಟ ನಡೆಸಿದ್ದೇನೆ ಎಂದು ತಿಳಿಸಿದರು.
ಮುಂದೆ ಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬರಲು ಅವಕಾಶ ಸಿಗಬೇಕು, ಮುಂದೆ ಪ್ರಧಾನಿ ನರೇಂದ್ರ ಮೋದಿಯವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು. ದೇವರಲ್ಲಿ ನಾನು ಪ್ರಾರ್ಥನೆ ಮಾಡುತ್ತೇನೆ ಎಂದರು.
ವಿಧಾನಸೌಧದಿಂದ ಕಾಲ್ನಡಿಗೆಯಲ್ಲೇ ಯಡಿಯೂರಪ್ಪ ರಾಜಭವನಕ್ಕೆ ತೆರಳಲಿದ್ದಾರೆ, ಈ ಹಿಂದೆ 2011ರಲ್ಲಿ ಕೃಷ್ಣಾಂಧಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ರಾಜೀನಾಮೆ ಕೊಟ್ಟಿದ್ದರು. ಇದೀಗ ನಾಲ್ಕನೇ ಬಾರಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಯಡಿಯೂರಪ್ಪ ಮುಂದಾಗಿದ್ದಾರೆ.