ಕಾರವಾರ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ಬೆಳಿಗ್ಗೆ ಉತ್ತರಕನ್ನಡಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸುವ ಕಾರ್ಯಕ್ರಮದ ಜೊತೆ ಬಸವರಾಜ ಬೊಮ್ಮಾಯಿ ಉತ್ತರಕನ್ನಡದ ಹಲವು ಕಡೆಗಳಲ್ಲಿ ಸಂಚರಿಸಿ ಪರಿಸ್ಥಿತಿ ಅವಲೋಕನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಬದಲಾಗಿತ್ತು ಕಾರ್ಯಕ್ರಮ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 16ರಂದು ಕಾರವಾರಕ್ಕೆ ಆಗಮಿಸಿ  ಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಇತ್ತು, ಕಾರ್ಯಕ್ರಮದ ರೂಪುರೇಷ ಸಿದ್ದಪಡಿಸುವಂತೆ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ ಚನ್ನಬಸವೇಶ ಸೂಚಿಸಿದ್ದರಾದರೂ ಅಂತಿಮ ಕ್ಷಣದಲ್ಲಿ ಕಾರ್ಯಕ್ರಮ ಬದಲಾಗಿತ್ತು.

RELATED ARTICLES  ರಾಷ್ಟ್ರಮಟ್ಟದ ಪ್ರತಿಭೆ ಬಾಡದ ಪ್ರಥಮ್

ರಾಜೀನಾಮೆ ನೀಡಿದ ಬಿ.ಎಸ್.ವೈ

ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೊನ್ನೆಯ ದಿನ ಶ್ರೀ ಬಿ ಎಸ್ ಯಡಿಯೂರಪ್ಪ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿತ್ತು, ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದು ಸ್ವತಃ ಮುಖ್ಯಮಂತ್ರಿಗಳೇ ತಿಳಿಸಿದ್ದಾರೆ ಎನ್ನಲಾಗಿತ್ತು. ಅಂತಿಮ ಕ್ಷಣದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

RELATED ARTICLES  ಪಕ್ಷೇತರ ಅಭ್ಯರ್ಥಿಯಾಗಿ ಶಾರದಾ ಮೋಹನ ಶೆಟ್ಟಿ ನಾಮಪತ್ರ ಸಲ್ಲಿಕೆ.

ಈಗ ನೂತನ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ತೀವ್ರ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಜಿಲ್ಲಾ ಮೂಲಗಳಿಂದ ಅಧಿಕೃತವಾಗಿ ಪೂರ್ಣ ಮಾಹಿತಿ ಬರಬೇಕಾಗಿದ್ದು, ಕಾರ್ಯಕ್ರಮದ ರೂಪುರೇಷೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.