• ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್‌ಗಳ ಪರೀಕ್ಷೆಗೆ ಮಾತ್ರ ಯುಜಿಸಿ ಆದೇಶ.
  • ಯುಜಿಸಿ ನಿಯಮ ಪಾಲಿಸಲು ಕವಿವಿಗೆ ಎಸ್ಎಫ್ಐ ಆಗ್ರಹ

ಕಾರವಾರ: ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ‘ವರ್ಷಾಂತ್ಯದ ಸೆಮಿಸ್ಟರ್ ಅಥವಾ ಅಂತಿಮ ಸೆಮಿಸ್ಟರ್’ಗೆ ಮಾತ್ರ ‘ಆಫ್‌ಲೈನ್ ಅಥವಾ ಆನ್‌ಲೈನ್ ಪರೀಕ್ಷೆ ನಡೆಸುವಂತೆ ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ)ವು ದಿನಾಂಕ:16.07.2021 ರಂದು ಆದೇಶ ಹೊರಡಿಸಿದೆ.

ಕೋವಿಡ್-19ನಿಂದಾಗಿ ಮುಂದೂಡಲ್ಪಟ್ಟಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಬದಲಿಗೆ, ಹಿಂದಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ ಆಥವಾ ಆಂತರಿಕ ಮೌಲ್ಯಮಾಪನದ ಮೂಲಕ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಬೇಕಿದ್ದ 2020-21ನೇ ಸಾಲಿನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ 1, 3, 5 ಹಾಗೂ 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಕೊವಿಡ್ -19ರ ಲಾಕ್ ಡೌನ್ ಕಾರಣ ಮುಂದೂಡಿದ್ದವು. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ 2, 4, 6 ಹಾಗೂ 8ನೇ ಸೆಮಿಸ್ಟರ್‌ ತರಗತಿಗಳನ್ನು ಆನ್ಲೈನ್ ನಲ್ಲಿ ಪ್ರಾರಂಭಿಸಿ, ಜುಲೈ ಅಂತ್ಯದ ವೇಳೆಗೆ ಎರಡು ಸೆಮಿಸ್ಟರ್ ಗಳ ಪರೀಕ್ಷೆಗಳನ್ನು ನಡೆಸಲು ಮುಂದಾಗಿದವು. ವಿಶ್ವವಿದ್ಯಾಲಯಗಳ ಈ ಕ್ರಮಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)ಸಂಘಟನೆಯು ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕೇವಲ ವರ್ಷಾಂತ್ಯದ 2, 4, 6 ಹಾಗೂ 8ನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿರುವ ಯುಜಿಸಿ, 1, 3, 5, 7ನೇ ಸೆಮಿಸ್ಟರ್‌ಗೆ ಆಂತರಿಕ ಮೌಲ್ಯಮಾಪನದ ಮೂಲಕ ಫಲಿತಾಂಶ ಪ್ರಕಟಿಸುವಂತೆ ಆದೇಶಿಸಿದೆ. ಯುಜಿಸಿ ಈ ನಿಯಮವನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗಾಳಿಗೆ ತೂರಿ ತನ್ನದೇ ಅವೈಜ್ಞಾನಿಕ ಪರೀಕ್ಷಾ ನೀತಿಯನ್ನು ಜಾರಿ ಮಾಡಲು ಮುಂದಾಗಿರುವದನ್ನು ಭಾರತ ವಿದ್ಯಾರ್ಥಿ ಫೆಡರೇಶನ್(SFI) ಉತ್ತರ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

RELATED ARTICLES  ದೇವರ ನಾಡು ಕೇರಳದಲ್ಲಿ ಮತ್ತೆ ಪ್ರವಾಹ ಭೀತಿ: 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಸೆ.24ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ತರಗತಿಗಳು ಶುರುವಾಗಲಿವೆ. ಈ ಬಾರಿ ತರಗತಿಗಳನ್ನು ಆಫ್‌ಲೈನ್, ಆನ್‌ಲೈನ್‌ ಅಥವಾ ಎರಡೂ ಮಾದರಿಯಲ್ಲಿ ನಡೆಸಲು ಯುಜಿಸಿ ನಿರ್ದೇಶಿಸಿದೆ.

RELATED ARTICLES  ಕಳಚಿದ ಚಂದನವನದ ಇನ್ನೊಂದು ಕೊಂಡಿ

ಜುಲೈ ಅಂತ್ಯದ ವೇಳೆಗೆ ಐಸಿಎಸ್‌ಇ, ಸಿಬಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ 12ನೇ ತರಗತಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ಸೆ.30ರ ಒಳಗೆ ಎಲ್ಲಾ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಖಾಲಿ ಉಳಿದ ಪ್ರಕ್ರಿಯೆಯನ್ನು ಸೀಟುಗಳ ಭರ್ತಿ ಒಳಗೆ ಪೂರ್ಣಗೊಳಿಸಿ, ಅಗತ್ಯ ದಾಖಲೆಗಳ ಸಲ್ಲಿಕೆಗೆ ಡಿ.31ರ ವರೆಗೆ ಅವಕಾಶ ನೀಡಬೇಕು ಎಂದು ಯುಜಿಸಿ ಸೂಚಿಸಿದೆ.

ಅದರಂತೆ ಯುಜಿಸಿ ನಿಯಮ ಪಾಲಿಸದೇ ಅವೈಜ್ಞಾನಿಕ ಪರೀಕ್ಷಾ ನೀತಿ ಪಾಲಿಸಲು ಮುಂದಾಗಿರುವ ಕರ್ನಾಟಕ ವಿಶ್ವವಿದ್ಯಾಲಯದ ನೀತಿಗೆ ವಿದ್ಯಾರ್ಥಿಗಳು ತೀವ್ರ ವಿರೋಧಿಸಿ ಈಗಾಗಲೇ ಹಲವಾರು ಕಡೆ ಪ್ರತಿಭಟನೆ ಮಾಡಿ ಮನವಿಯನ್ನು ಸಲ್ಲಿಸಿದ್ದಾರೆ.

ಆದ್ದರಿಂದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ವಿಷಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ತನ್ನ ಹಠಮಾರಿ ಧೋರಣೆಯನ್ನು ಬಿಟ್ಟು, ಯುಜಿಸಿ ಯ ಆದೇಶವನ್ನು ಜಾರಿಗೆ ಮುಂದಾಗಬೇಕೆಂದು ಇಲ್ಲದಿದ್ದರೆ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆಯ ನೇತೃತ್ವದಲ್ಲಿ ತೀವ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಉತ್ತರ ಕನ್ನಡ ಜಿಲ್ಲಾ ಸಮಿತಿಯು ಎಚ್ಚರಿಸುತ್ತದೆ. ಎಂದು ಜಿಲ್ಲಾ ಸಂಚಾಲಕರಾದ ಗಣೇಶ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.