ಹೊನ್ನಾವರ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯಕ್ಕೆ ಹೇರಳ ಪ್ರಮಾಣದ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಮೀಟರ್ ಆಗಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ 1806.20 ಮೀಟರ್‌ ತುಂಬಿದೆ.
ಒಳಹರಿವಿನ ಪ್ರಮಾಣ ಸುಮಾರು 18552 ಕ್ಯೂಸೆಕ್ಗಳಿದ್ದು, ಹೀಗೆ ನೀರಿನ ಒಳಹರಿವು ಮುಂದುವರೆದರೆ ಆಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುತ್ತದೆ ಎಂದು ಲಿಂಗನಮಕ್ಕಿ ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ಎರಡನೇ ಎಚ್ಚರಿಕೆ ನೀಡಿದ್ದಾರೆ. ಲಿಂಗನಮಕ್ಕಿ ಆಣೆಕಟ್ಟೆಯ ಕೆಳಭಾಗದಲ್ಲಿ ದೋಣಿ ಸಂಚಾರ, ಮೀನುಗಾರಿಗೆ ಮತ್ತು ಇತರೆ ಚಟುವಟಿಕೆಗಳನ್ನು ನಡೆಸಬಾರದು. ಆಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ದಡದಲ್ಲಿ ವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

RELATED ARTICLES  ಭಟ್ಕಳದಲ್ಲಿ ಯೋಗ ದಿನಕ್ಕೆ ಸಿದ್ಧತೆ