ಕಾರವಾರ : ಮಾಜಿ ಸಿಎಂ ಸಿದ್ದರಾಮಯ್ಯ ಆಗಸ್ಟ್ 1 ರಂದು ಕಾರವಾರಕ್ಕೆ ಆಗಮಿಸಿ ಆಗಸ್ಟ್ 2 ರ ಸೋಮವಾರ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ನೆರೆ ಹಾವಳಿಯಿಂದ ತೊಂದರೆಗಿಡಾದ ಕಾರವಾರ ಮತ್ತು ಅಂಕೋಲಾ ತಾಲೂಕುಗಳ ವಿವಿಧ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಭೇಟಿ ನೀಡಲಿದ್ದಾರೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸತೀಶ್ ಸೈಲ್ ತಿಳಿಸಿದ್ದಾರೆ.
ಅಗಸ್ಟ್ 1 ರಂದು ಕಾರವಾರದಲ್ಲಿ ವಾಸ್ತವ್ಯ ಮಾಡಲಿರುವ ಅವರು ಅಗಸ್ಟ್ 2 ರಂದು ಕದ್ರಾ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ಥರೊಂದಿಗೆ ಮಾತನಾಡಿ ಹಣಕೋಣ, ಗೋಟೆಗಾಳಿ, ಘಡಸಾಯಿ, ಕದ್ರಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂತ್ರಸ್ಥರ ಅಹವಾಲು ಸ್ವೀಕರಿಸಿ ಕೆ.ಪಿ.ಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ನಂತರ ಮಲ್ಲಾಪುರ ಭೇಟಿ ನೀಡಲಿರುವ ಅವರು ಅಲ್ಲಿ ಹಾನಿಗೊಳಗಾದ ಪ್ರದೇಶ ವೀಕ್ಷಿಸಿ ಅಣುಸ್ಥಾವರ ಅಧಿಕಾರಿಗಳೊಂದಿಗೆ ಪರಿಹಾರದ ಕುರಿತು ಚರ್ಚೆ ನಡೆಸಲಿದ್ದಾರೆ .ಮದ್ಯಾಹ್ನ ಅಂಕೋಲಾ ತೆರಳಿ ಶಿರೂರು, ವಾಸರ ಕುದ್ರಿಗೆ ಪ್ರದೇಶಗಳಿಗೆ ಭೇಟಿ ನೀಡಿ ಅಂಕೋಲಾ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಪರಿಹಾರ ವಿತರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವ ಸಿದ್ಧರಾಮಯ್ಯ ಅವರು ತದನಂತರ ನಾಡವರ ಸಭಾ ಭವನದಲ್ಲಿ ನೆರೆ ಪೀಡಿತ ಜನರ ಅಹವಾಲು ಸ್ವೀಕರಿಸಲಿದ್ದಾರೆ.
ಅಂಕೋಲಾ ತಾಲೂಕಿನ ನೆರೆ ಪೀಡಿತ ಡೋಂಗ್ರಿ, ಸುಂಕಸಾಳ, ಹಿಲ್ಲೂರ,ಮೊಗಟಾ,- ಅಚವೆ, ಶೆಟಗೇರಿ, ಬೆಳಸೆ, ವಾಸರೆ, ಹೊನ್ನೆಬೈಲ್, ಅಗ್ರಗೋಣ ಹಾಗೂ ನೆರೆಯಿಂದ ಸಂಕಷ್ಟಕ್ಕೊಳಗಾದ ಇತರೆ ಎಲ್ಲಾ ಗ್ರಾ.ಪಂ ವ್ಯಾಪ್ತಿಯ ಜನರು ಹಾಗೂ ನದಿ ತೀರದ ನಿವಾಸಿಗಳು ಈ ಸಭೆಯಲ್ಲಿ ತಮ್ಮ ಅಹವಾಲುಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಸುದ್ದಿಗಳ ಮೇಲೆ ಕ್ಲಿಕ್ ಮಾಡಿ
- ಸಂಸದ ಕಾಗೇರಿಯವರ ಮನೆ ಸಮೀಪ ಚಿರತೆ ಪ್ರತ್ಯಕ್ಷ.ಶಿರಸಿ : ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮನೆಯ ಅಂಗಳದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ… Read more: ಸಂಸದ ಕಾಗೇರಿಯವರ ಮನೆ ಸಮೀಪ ಚಿರತೆ ಪ್ರತ್ಯಕ್ಷ.
- “ತರಂಗ ಫರ್ನಿಚರ್ ಫೆಸ್ಟಿವಲ್” ಪ್ರಾರಂಭವಾಗಿದೆ.ಕುಮಟಾ : ಜನರು ಬಹುವಾಗಿ ಮೆಚ್ಚಿಕೊಂಡ ಹಾಗೂ ಜನರ ಭರವಸೆಗೆ ತಕ್ಕಂತೆ ಗುಣಮಟ್ಟದ ವಸ್ತುಗಳನ್ನು ಒದಗಿಸಿರುವ, ಜಿಲ್ಲೆಯ… Read more: “ತರಂಗ ಫರ್ನಿಚರ್ ಫೆಸ್ಟಿವಲ್” ಪ್ರಾರಂಭವಾಗಿದೆ.
- ಸರಸ್ವತಿ ಪಿ.ಯು ಕಾಲೇಜಿನಲ್ಲಿ ‘ಸಂಸ್ಕಾರಧಾರೆ’ ಅರ್ಥಪೂರ್ಣ ಕಾರ್ಯಕ್ರಮಕುಮಟಾ : ಎಲ್ಲಿಯೋ ಹರಕೆ ಹೊತ್ತು, ಜೀವನಕ್ಕೆ ನೆರವಾಗುತ್ತಾರೆಂದು ಮಕ್ಕಳನ್ನು ಪಡೆದು ಅವರ ಸಂತೋಷದಲ್ಲಿಯೇ ತಮ್ಮ ಸಂತೋಷವನ್ನು… Read more: ಸರಸ್ವತಿ ಪಿ.ಯು ಕಾಲೇಜಿನಲ್ಲಿ ‘ಸಂಸ್ಕಾರಧಾರೆ’ ಅರ್ಥಪೂರ್ಣ ಕಾರ್ಯಕ್ರಮ
- ಸಮುದ್ರದಲ್ಲಿ ಮುಳುಗುತ್ತಿರುವ ನಾಲ್ವರ ರಕ್ಷಣೆಗೋಕರ್ಣ: ಇಲ್ಲಿಯ ಮುಖ್ಯ ಕಡಲ ತೀರದ ಮಿಡ್ಸ್ ಬೀಚಿನ ಬಳಿ ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಕೇರಳ ಮೂಲದ… Read more: ಸಮುದ್ರದಲ್ಲಿ ಮುಳುಗುತ್ತಿರುವ ನಾಲ್ವರ ರಕ್ಷಣೆ
- ಮೊಬೈಲ್ ರಿಪೇರಿ, ಸೇವೆ ಕುರಿತ ಉಚಿತ ತರಬೇತಿಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯ ವತಿಯಿಂದ… Read more: ಮೊಬೈಲ್ ರಿಪೇರಿ, ಸೇವೆ ಕುರಿತ ಉಚಿತ ತರಬೇತಿ