ಅಂಕೋಲಾ : ತಾಲೂಕಿನ ಹಾರವಾಡ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರವಾರದ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ಮುಗಿಸಿ, ಮನೆಗೆ ಹಿಂತಿರುಗುತ್ತಿದ್ದ ಇರ್ವ ಸಹೋದ್ಯೋಗಿ ಮಿತ್ರರಲ್ಲಿ ಬೈಕ್ ಸವಾರ ಮೃತ ಪಟ್ಟು, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

RELATED ARTICLES  ಉತ್ತರ ಕನ್ನಡದಲ್ಲಿಯೂ ಬ್ಯಾಂಕ್‍ಗಳ ವ್ಯವಹಾರ ಕನ್ನಡದಲ್ಲಿಯೇ ಇರಲಿ: ಜಿಲ್ಲಾಧಿಕಾರಿ.

ಹೊನ್ನಳ್ಳಿಯ ರವಿ ಲೋಕು ಗೌಡ ಮೃತ ದುರ್ದೈವಿಯಾಗಿದ್ದಾನೆ. ಬೈಕ್ ಹಿಂಬಂದಿ ಸವಾರ ಹರೀಶ ಸೋಮು ಗೌಡನಿಗೆ ಗಂಭೀರ ಗಾಯಗಳಾಗಿದ್ದು ಈತನನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಹಟ್ಟಿಕೇರಿ ನಿರಾಶ್ರಿತರ ಕಾಲನಿಯ ನಿವಾಸಿ ಎನ್ನಲಾಗಿದೆ.

ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿ.ವೈ.ಎಸ್. ಪಿ ಅರವಿಂದ ಕಲಗುಜ್ಜಿ, ಆರಕ್ಷಕ ನಿರೀಕ್ಷಕ ಸಂತೋಷ ಶೆಟ್ಟಿ, ಪಿ.ಎಸ್. ಐ ಪ್ರವಿಣಕುಮಾರ್ ಅಪಘಾತ ಸ್ಥಳಕ್ಕೆಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ಸಹಕರಿಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಅಂಕೋಲಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES  ಗೋಕರ್ಣ: ಭಾರತೀಯ ಧಾರ್ಮಿಕತೆಗೆ ಮಾರುಹೋದ ವಿದೇಶಿಗರು