ಕಾರವಾರ : ಉತ್ತರಕನ್ನಡದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಇಂದು ಮತ್ತೆ ಕೊರೋನಾ ಏರಿಕೆ ಕಂಡಿರುವುದು ಜನರಿಗೆ ಎಚ್ಚರಿಕೆಯ ಗಂಟೆಯಾಗಿದೆ. ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ನ ಪ್ರಕಾರ ನಿನ್ನೆ 75  ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.

ಇಂದಿನ ಹೆಲ್ತ ಬುಲೆಟಿನ್ ಪ್ರಕಾರ ಇಬ್ಬರು ಕೊರೋನಾಕ್ಕೆ ಬಲಿಯಾಗಿದ್ದು ಹೊನ್ನಾವರದಲ್ಲಿಯೇ ಎರಡು ಸಾವು ಸಂಭವಿಸಿದೆ ಉತ್ತರ ಕನ್ನಡದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 730 ಆಗಿದೆ.

ಹೆಲ್ತ ಬುಲೆಟಿನ್ ಪ್ರಕಾರ ಕಾರವಾರದಲ್ಲಿ 10, ಅಂಕೋಲಾದಲ್ಲಿ 14, ಕುಮಟಾದಲ್ಲಿ 16, ಹೊನ್ನಾವರ 17, ಭಟ್ಕಳದಲ್ಲಿ 7, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 3, ಯಲ್ಲಾಪುರದಲ್ಲಿ 1, ಮುಂಡಗೋಡ 0, ಹಳಿಯಾಳದಲ್ಲಿ 0, ಮತ್ತು ಜೋಯಿಡಾದಲ್ಲಿ 1 ಒಟ್ಟೂ 75 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಕೇಂದ್ರ ಸರ್ಕಾರದಿಂದ ಇನ್ನೂ ಬಾರದ ಪರಿಹಾರ!

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 424 ಆಗಿದ್ದು, ಅವರಲ್ಲಿ 49 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 375 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 8, ಅಂಕೋಲಾ‌ 8, ಕುಮಟಾ 8, ಹೊನ್ನಾವರ 8, ಭಟ್ಕಳ 0, ಶಿರಸಿ 0, ಸಿದ್ದಾಪುರ 0, ಯಲ್ಲಾಪುರ 0, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 32 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಹೆಬಳೆಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಧನ‌ಸಹಾಯ ಮಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಕರೋನಾ ಹೆಲ್ತ್ ಬುಲೆಟಿನ್ ಪ್ರಕಾರ ಹೊನ್ನಾವರ ಅತಿ ಹೆಚ್ಚು ಅಂದರೆ 17 ಜನರಲ್ಲಿ ಕುಮಟಾ ಎರಡನೆಯ ಸ್ಥಾನ ಅಂದರೆ 16 ಜನರಲ್ಲಿ ಕರೋನಾ ಕಾಣಿಸಿಕೊಂಡಿದೆ.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.