ಕುಮಟಾ: ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ, ಅಲ್ಲಿನ ಅವ್ಯವಸ್ಥೆಯ ಕುರಿತು ನಿಲ್ದಾಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸ್ವಚ್ಛತೆಯ ಕುರಿತು ಖಡಕ್ ಆಗಿ ಪಾಠ ಹೇಳಿದ್ದಾರೆ.

ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಮಾಯವಾಗಿ ಅವ್ಯವಸ್ಥೆಯ ಆಗರವಾಗಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬಂದ ತಕ್ಷಣ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ದಿನಕರ ಶೆಟ್ಟಿ,  ನಿಲ್ದಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಅಲ್ಲದೇ, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೂ ಕುಮಟಾದ ರೇಲ್ವೇ ನಿಲ್ದಾಣದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶಗೊಂಡರು.

RELATED ARTICLES  ಕರಾಟೆ ತರಗತಿ ಉದ್ಘಾಟನಾ ಕಾರ್ಯಕ್ರಮ.

ಪ್ರತಿನಿತ್ಯ ಸಾವಿರಾರು ಸಾರ್ವಜನಿಕರು ಆಗಮಿಸುವ ಕುಮಟಾ ತಾಲೂಕಾ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ನೋಡಿಕೊಂಡು ಬನ್ನಿ. ಸ್ವಚ್ಛತೆಗೆ ನಿಮಗೆ ಸಾಕಷ್ಟು ಅನುದಾನ ಬಂದರೂ ಅದರ ಕುರಿತು ಗಮನಹರಿಸುತ್ತಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ನಿಲ್ದಾಣದ ಆವರಣದ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವುದು ಅಧಿಕಾರಿಗಳ ಕರ್ತವ್ಯ. ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಸೂಚನೆ ನೀಡಿದರು.

RELATED ARTICLES  ಗಾಂಜಾ ಮಾರಾಟ : ವ್ಯಕ್ತಿ ಅರೆಸ್ಟ್..!

ಈ ಹಿಂದೆ ಕುಮಟಾ ರೇಲ್ವೆ ನಿಲ್ದಾಣವು
ಸ್ವಚ್ಛತೆಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದು
ಸುದ್ದಿಯಾಗಿತ್ತು. ಆದರೆ ಈಗ ಗಬ್ಬು ನಾರುವ ಕಾರಣದಿಂದ ಸುದ್ದಿಯಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಕಾರ್ಯಕ್ಷಮತೆಯೇ ಕಾರಣ. ಸ್ವಚ್ಛತೆಯ ಕುರಿತು ಈಗಿನ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಬೇಸರದ ಸಂಗತಿ. ಇದರ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.