ಕುಮಟಾ : ಕುಮಟಾ ಮೂಲಕ ಮಂಗಳೂರಿಗೆ  ಬೈಕ್ ರ್ಯಾಲಿ ಮೂಲಕ ಸಾಗಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ತಡೆ ಒಡ್ಡಿದ್ದರಿಂದ, ಕುಮಟಾದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.

IMG 20170906 WA0004
ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಹೆಗಡೆ ಕ್ರಾಸ್ ಎದುರಿಗೆ ಸಭೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ರಮಾನಾಥ್ ರೈ ವಿರುದ್ಧ ವಾಗ್ದಾಳಿ ನಡೆಸಿದರು. ಮಂಗಳೂರಿನ ದೇಶ ವಿರೋಧಿ ಸಂಘಟನೆಯಾದ ಪಿಎಫ್ಐ ಹಾಗೂ ಕೆಎಫ್ಡಿ ಸಂಘಟನೆಯನ್ನು ರಮಾನಾಥ್ ರೈ ಸಿದ್ದರಾಮಯ್ಯ ಪರೋಕ್ಷವಾಗಿ ಬೆಳೆಸುತ್ತಿದ್ದಾರೆ. ಇಂತಹ ಬೆಂಬಲದಿಂದ ಹಿಂದೂ ಸಂಘಟನೆಯ ಮುಖಂಡರ ಕೊಲೆಯಾಗುತ್ತಿದೆ. ಒಟ್ಟು 27  ಹಿಂದೂ ಮುಖಂಡರ ಕೊಲೆಗಳು ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದಿದ್ದು, ಯಾವುದೇ ತನಿಖೆ ಸಹಿತ ಸರಿಯಾದ ಮಾರ್ಗದಲ್ಲಿ ನಡೆದಿಲ್ಲ. ಈ ಎಲ್ಲ ಕೊಲೆ ಪ್ರಕರಣಗಳನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕೆಂದು ಅವರು ಆಗ್ರಹಿಸಿದರು.

RELATED ARTICLES  ದಾಖಲೆಯಿಲ್ಲದ 17 ಲಕ್ಷ ರೂ. ಪೊಲೀಸ್ ವಶಕ್ಕೆ.

IMG 20170906 WA0001

ಕರಾವಳಿ ಜಿಲ್ಲೆಗಳಲ್ಲಿ ಆತಂಕ ಸೃಷ್ಟಿಸುತ್ತಿರುವ ಈ ಸಂಘಟನೆಗಳನ್ನು ನಿಷೇದಿಸಬೇಕು. ಕರಾವಳಿ ಜಿಲ್ಲೆಗಳ ಅಹಿತಕರ ಘಟನೆಗೆ ನಿಷೇಧಿತ ರಾಷ್ಟ್ರ ವಿರೋಧಿ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಸಚಿವ ರಮಾನಾಥ್ ರೈ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.
ಯಾವುದೇ ಕಾರಣಕ್ಕೂ ಮಂಗಳೂರು ಚಲೋ ರ್ಯಾಲಿಯನ್ನು ತಡೆಯಲು ಸರಕಾರದಿಂದ ಸಾಧ್ಯವಿಲ್ಲ ಬಿಜೆಪಿ ಕಾರ್ಯಕರ್ತರು ಯಾವುದೇ ಮಾರ್ಗದ ಮೂಲಕ ಏಳನೇ ತಾರೀಖಿನ ಮಂಗಳೂರು ಚಲೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಯೇ ಸಿದ್ಧ ಎಂದು ಅವರು ಹೇಳಿದರು.
ಪೂರ್ವ ನಿಗದಿ ಪಡಿಸಿದಂತೆ ಇಂದು ಬುಧವಾರ ಅಂಕೋಲಾ ಕುಮಟಾ ಹೊನ್ನಾವರ ಮತ್ತು ಭಟ್ಕಳದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿಫಲತೆ ಹಾಗೂ ಹೇಡಿತನದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು.

RELATED ARTICLES  ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಭವ್ಯ ಭವಿಷ್ಯದ ಸೂಚಕ: ರಾಘವೇಶ್ವರ ಶ್ರೀ

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನಾಗರಾಜ ನಾಯಕ ತೊರ್ಕೆ,ಸೂರಜ್ ನಾಯಕ ಸೋನಿ,ಡಾ ಜಿ ಜಿ ಹೆಗಡೆ ಇನ್ನಿತರರು ಹಾಗೂ ಸಾವಿರಾರು ಕಾರ್ಯಕರ್ತರು ಹಾಜರಿದ್ದರು.